ಮಡಿಕೇರಿ ಜ.6 NEWS DESK : ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 2026ರ ಜ.5 ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು ಅವರು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.780, ಪ್ರಸ್ತುತ ನಿಗದಿಪಡಿಸಿದ ಪ್ರಯಾಣ ದರ ರೂ.700, ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.680, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಕುಶಾಲನಗರ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.500, ವಿರಾಜಪೇಟೆ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಗೋಣಿಕೊಪ್ಪ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.620,ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಸೋಮವಾರಪೇಟೆ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.630, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಮಡಿಕೇರಿ-ಮೈಸೂರು ಮಾರ್ಗ ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.570, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.450, ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.430, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.280 ಆಗಿದೆ. ಸಾರ್ವಜನಿಕ ಪ್ರಯಾಣಿಕರು ಈ ರಿಯಾಯಿತಿ ಪ್ರಯಾಣದರದ ಸದುಪಯೋಗವನ್ನು ಪಡೆದುಕೊಂಡು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವಂತೆ ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು ಅವರು ಕೋರಿದ್ದಾರೆ.










