ಮಡಿಕೇರಿ ಜ.6 NEWS DESK : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಹಾಗೂ ಎಸ್ಪಿ ಕಚೇರಿಗೆ ಭೇಟಿ ನೀಡಿದ ಘಟಕದ ಪ್ರಮುಖರು ಹೂಗುಚ್ಚ ನೀಡಿ ಸ್ವಾಗತಿಸಿದರು. ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮತ್ತು ಜಿಲ್ಲಾ ಕೆಡಿಪಿ ಸದಸ್ಯೆ ಸುನೀತ ಮಂಜುನಾಥ್, ಪುರಸಭೆ ಮಾಜಿ ನಾಮನಿರ್ದೇಶಿತ ಸದಸ್ಯೆ ಪದ್ಮಾವತಿ, ಲೇಖಕಿ ಎಂ.ಎ.ರುಬೀನಾ ಮತ್ತು ಪಕ್ಷದ ಮುಖಂಡರು ಇದ್ದರು. ಇದೇ ಸಂದರ್ಭ ಲೇಖಕಿ ಎಂ.ಎ.ರುಬೀನಾ ಅವರು ತಮ್ಮ ಕೃತಿ ಕಣ್ಣಾ ಮುಚ್ಚಾಲೆ ಪುಸ್ತಕವನ್ನು ಹಸ್ತಾಂತರಿಸಿದರು.











