
ಮಡಿಕೇರಿ ಜ.7 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 34ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆಯ ಅಂಗವಾಗಿ ಜ.23 ರಂದು ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್, ಜಿಲ್ಲಾ ಮಟ್ಟದ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಪುರುಷರ ಮಹಿಳೆಯರ ಮತ್ತು ಪೌಢಶಾಲಾ ಮಕ್ಕಳ ಮ್ಯಾರಾಥಾನ್ ನಡೆಯಲಿದೆ. ಮೈ ಭಾರತ್, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ಮತ್ತು ಮಹಿಳೆಯರ ಹಗ್ಗಜಗ್ಗಾಟದಲ್ಲಿ ಭಾಗವಹಿಸುವ ಕ್ರೀಡಾ ತಂಡಗಳು ಜ.20 ರ ಒಳಗಾಗಿ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9741771810, 8762066118, 9632007915 ಸಂಪರ್ಕಿಸಬಹುದಾಗಿದೆ.









