
ಮಡಿಕೇರಿ ಜ.8 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 14 ಮತ್ತು 17 ವರ್ಷದೊಳಗಿನ ಜಿಲ್ಲಾ ಮಟ್ಟದ ವಿಶೇಷಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಜನವರಿ, 12 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿ(ಪ್ರೌಢ ಶಾಲಾ ವಿಭಾಗ)ನಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ತಿಳಿಸಿದ್ದಾರೆ.








