
ನಾಪೋಕ್ಲು ಜ.10 NEWS DESK : ಹುಣ್ಣಿಮೆ ಅಂಗವಾಗಿ ನಾಪೋಕ್ಲು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಾಗಮಂಡಲ ವತಿಯಿಂದ ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿಗೆ 181ನೇ ಮಹಾ ಆರತಿ ನಡೆಯಿತು. ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ನಾಪೋಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸುಭಾಷ್ ನಗರದ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೆಟಿರ ಅರುಣ್ ಬೇಬ, ಬಿ.ಎಮ್ ಪ್ರತಿಪ ಒಕ್ಕೂಟದ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಪಾಲ್ಗೊಂಡಿದ್ದರು. –
ವರದಿ : ದುಗ್ಗಳ ಸದಾನಂದ.








