
ಮಡಿಕೇರಿ ಜ.10 NEWS DESK : ನಗರದ ಮೈತ್ರಿ ಭವನದ ಬಳಿ ನೂತನವಾಗಿ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಿರುವ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಹಳೆ ರೈಫಲ್ ರೇಂಜ್ ವಸತಿ ಗೃಹಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿರುವ ಸಿಬ್ಬಂದಿ ಕುಟುಂಬದವರೊಂದಿಗೆ ಮಾತನಾಡಿ ಮೂಲಭೂತ ಸೌಕರ್ಯ ಮತ್ತು ಸಮಸ್ಯೆಗಳ ಬಗ್ಗೆ ಆಲಿಸಿದರು.









