
ಮಡಿಕೇರಿ ಜ.10 NEWS DESK : ವಿರಾಜಪೇಟೆ ಪುರಾಸಭೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ವಿರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯ, ರೂ.24 ಲಕ್ಷ ನಿಸರ್ಗ ಬಡಾವಣೆ ಹಾಗೂ ರೂ.5ಲಕ್ಷ ವಿಜಯನಗರ ಬಡಾವಣೆ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ಎರಡು ಕಾಂಕ್ರೀಟೀಕರಣ ಕಾಮಗಾರಿ ಕೈಗೊಳ್ಳಲಾಗಿತ್ತು. ರಸ್ತೆ ಉದ್ಘಾಟಿಸಿ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಈ ರಸ್ತೆ ತೆರಳಲು ತುಂಬಾ ಕಷ್ಟಕರವಾಗಿರುವುದನ್ನು ಸ್ಥಳೀಯರು ತನ್ನ ಗಮನಕ್ಕೆ ತಂದಿದ್ದು, ಸಾರ್ವಜನಿಕರ ಬೇಡಿಕೆಯಂತೆ ಈ ಎರಡು ರಸ್ತೆಯನ್ನು ನಿರ್ಮಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಾಸಭೆ ಮಾಜಿ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್, ಅತಿಫ್ ಮನ್ನ, ರಜಿನಿಕಾಂತ್, ಪೃಥ್ವಿನಾಥ್, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಪಕ್ಷದ ಪ್ರಮುಖರಾದ ನಾಸಿರ್, ಜಗತ್, ಜಗದೀಶ್, ತಿಮ್ಮಯ್ಯ, ಮರ್ವಿನ್ ಲೋಬೊ, ಮೇಲ್ರಯ್ ಲೋಬೊ, ಪರದಂಡ ವಿಠಲ,ಬಟ್ಟಕಳಂಡ ರಾಜ, ರಾಜೇಶ್, ಶಶಿಧರನ್, ಮಂಜು ದೇವಯ್ಯ, ಅನಿಲ್, ಚೆಕು, ಹರೀಶ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್, ಯುವ ಬ್ಲಾಕ್ ಅಧ್ಯಕ್ಷರು ಶಬೀರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.









