Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ : ಜಾನುವಾರುಗಳು ಬಲಿ : ಗ್ರಾಮಸ್ಥರಲ್ಲಿ ಆತಂಕ : ಹುಲಿ ಸೆರೆಗೆ ಕಾರ್ಯಾಚರಣೆ
ಇತ್ತೀಚಿನ ಸುದ್ದಿಗಳು

*ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ : ಜಾನುವಾರುಗಳು ಬಲಿ : ಗ್ರಾಮಸ್ಥರಲ್ಲಿ ಆತಂಕ : ಹುಲಿ ಸೆರೆಗೆ ಕಾರ್ಯಾಚರಣೆ

January 10, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.10 NEWS DESK : ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ ಹೆಚ್ಚಾಗಿದ್ದು, ಜಾನುವಾರುಗಳನ್ನು ಕೊಂದು ಹಾಕಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಾಫಿ ತೋಟ ಮತ್ತು ಭತ್ತದ ಗದ್ದೆಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಬಿಟ್ಟಂಗಾಲ ಸಮೀಪದ ಕಂಡಂಗಾಲ ಗ್ರಾಮದ 1ನೇ ರುದ್ರಗುಪ್ಪೆಯ ರೈತ ಬಲ್ಲಡಿಚಂಡ ಲೋಕನಾಥ್ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಳೆದ 15 ದಿನಗಳಲ್ಲಿ ಈ ಭಾಗದಲ್ಲಿ 3 ಜಾನುವಾರುಗಳು ನಾಪತ್ತೆಯಾಗಿದ್ದು, ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಹುಲಿ ಸೆರೆಗೆ ಆಗ್ರಹಿಸಿ ಹಲವು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ರೈತ ಸಂಘದ ಪ್ರಮುಖರು ಸ್ಥಳಕ್ಕೆ ಆಗಮಿಸಿ ಅರಣ್ಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹುಲಿ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಘಟನಾ ಸ್ಥಳದಲ್ಲಿ ಹುಲಿ ಸೆರೆಗೆ ಬೋನನ್ನು ಅಳವಡಿಸಿರುವ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. *4 ಹಸುಗಳು ಬಲಿ* ಬಾಡಗ-ಬಾಣಂಗಾಲ ಗ್ರಾಮದಲ್ಲೂ ಹುಲಿ ದಾಳಿ ಮುಂದುವರೆದಿದ್ದು, ಶರ್ಲಿ ಎಂಬುವವರಿಗೆ ಸೇರಿದ ಹಸು ಬಲಿಯಾಗಿದೆ. ಗದ್ದೆಯಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದ ಸಂದರ್ಭ ಹುಲಿ ದಾಳಿ ಮಾಡಿದೆ. ಚೌಡಿಕಾಡು ಕಾಫಿ ತೋಟದೊಳಗೆ ಹಸುವಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯ ಎ.ಸಿ.ಎಫ್ ಗೋಪಾಲ್ ಹಾಗೂ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಾಡಗ-ಬಾಣಂಗಾಲ ಗ್ರಾಮದ ಮಠದ ಭಾಗದಲ್ಲಿ ಹುಲಿದಾಳಿಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ಹಸುಗಳು ಬಲಿಯಾಗಿವೆ. *ಬೋನ್, ಕ್ಯಾಮರಾ ಅಳವಡಿಕೆ* ಹುಲಿಯನ್ನು ಸೆರೆಹಿಡಿಯುವ ನಿಟ್ಟಿನಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಅವರ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಮಠದ ಕಾಫಿ ತೋಟದೊಳಗೆ ಬೋನ್ ಮತ್ತು ಐದು ಕ್ಯಾಮರಾಗಳನ್ನು ಅಳವಡಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ*
Next Article *ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಬಿ.ಎಂ.ಗಣೇಶ್‍ಗೆ ಸನ್ಮಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.