
ಮಡಿಕೇರಿ ಜ.12 NEWS DESK : ಜಿಲ್ಲೆಯ ಕುಟ್ಟ, ಶ್ರೀಮಂಗಲ, ಭಾಗಮಂಡಲ ಮತ್ತು ತಲಕಾವೇರಿ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ನಂತರ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.









