
ವಿರಾಜಪೇಟೆ ಜ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆಯ ಮಾಯಮುಡಿ ವಲಯದ ವತಿಯಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ವಲಯದ ಸದಸ್ಯರು ಹಾಗೂ ಗ್ರಾಮಸ್ಥರು ಮಾಯಮುಡಿ ಶ್ರೀ ರಾಮ ಮಂದಿರ ದೇವಾಲಯದ ಆವರಣದಲ್ಲಿದ್ದ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕ ವಸಂತ, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಸೇವಾ ಪ್ರತಿನಿಧಿ ಪುಷ್ಪಾ, ಪದಾಧಿಕಾರಿಗಳಾದ ಕೃಷಿನ, ಗೀತಾ, ಜಲಜ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಇದ್ದರು.









