
ನಾಪೋಕ್ಲುಜ.13 NEWS DESK : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆಯಲ್ಲಿ ರಘುಪತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಮೂರ್ನಾಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕಕ್ಕಬೆ ನಿವಾಸಿ ಎ.ಎ.ರಘುಪತಿ ಅವರು ನಾಟಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಜು ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವರದಿ : ದುಗ್ಗಳ ಸದಾನಂದ.









