
ಮಡಿಕೇರಿ ಜ.13 NEWS DESK : ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ದಕ್ಷತೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಿನಂದಿಸಿದರು. ನಗರದ ಜಿಲ್ಲಾ ಕವಾಯತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಇದ್ದರು.









