
ಮಡಿಕೇರಿ ಜ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವು ಜ.14 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಡಿ.ಸುಜಿತ್, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಉಷಾರಾಣಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಇತರರು ಪಾಲ್ಗೊಳ್ಳಲಿದ್ದಾರೆ.








