
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಸೋಮವಾರಪೇಟೆ ಮಂಡಲದ ಮಾಜಿ ಅಧ್ಯಕ್ಷ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಕುಮಾರಪ್ಪ (ಕುಮಾರಪ್ಪಣ್ಣ ) ಇಂದು ( ಜ.13 ) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಜ.14 ರಂದು ಸುಂಟಿಕೊಪ್ಪ ಸಮೀಪದ ಕಲ್ಲೂರಿನ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.









