
ಬೆಂಗಳೂರು NEWS DESK ಜ.13 : ಸೋಮವಾರಪೇಟೆ ತಾಲ್ಲೂಕು ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಮತ್ತು ಹೊಸ ಕಟ್ಟಡ ನಿರ್ಮಾಣ ವಿಚಾರವಾಗಿ 2026-2027 ರ ಆಯವ್ಯಯದಲ್ಲಿ ಅನುದಾನ ನೀಡುವ ಸಂಬಂಧ ಇಂದು ಶಾಸಕ ಡಾ.ಮಂತರ್ ಗೌಡ ಅವರು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಿದರು.









