Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಗಮನ ಸೆಳೆದ ಸಿರಿಧಾನ್ಯ ತಿನಿಸುಗಳ ಪ್ರದರ್ಶನ : ಸಿರಿಧಾನ್ಯ ಬಳಕೆಯಿಂದ ಆರೋಗ್ಯಯುತ ಜೀವನ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಗಮನ ಸೆಳೆದ ಸಿರಿಧಾನ್ಯ ತಿನಿಸುಗಳ ಪ್ರದರ್ಶನ : ಸಿರಿಧಾನ್ಯ ಬಳಕೆಯಿಂದ ಆರೋಗ್ಯಯುತ ಜೀವನ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

January 13, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯದ ಮಹತ್ವ ಕುರಿತು ಜಾಗೃತಿ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪ್ರಯುಕ್ತ ಜಾಥಾ ನಡೆಯಿತು. ನಗರದ ಕೋಟೆ ಆವರಣದಲ್ಲಿ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಿರಿಧಾನ್ಯದಲ್ಲಿ ಪೌಷ್ಠಿಕಾಂಶ ಹೆಚ್ಚಿದ್ದು, ಅದರ ಬಳಕೆಯಿಂದ ಆಯೋಗ್ಯಯುತ ಜೀವನ ನಡೆಸಬಹುದು. ಆದ್ದರಿಂದ ಈ ಬಗ್ಗೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಸಿರಿಧಾನ್ಯ ಉಪಯೋಗದಿಂದ ದೇಹದಲ್ಲಿ ಆಹಾರದ ಸಮತೋಲನ ಕಾಯ್ದುಕೊಳ್ಳಬಹುದು. ಮಧುಮೇಹ ಮತ್ತು ರಕ್ತದೊತ್ತಡದಿಂದ ದೂರವಿರಬಹುದು ಎಂದು ಜಿ.ಪಂ.ಸಿಇಒ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಮಾತನಾಡಿ, ಸಿರಿಧಾನ್ಯ ಉಪಯೋಗದಿಂದ ಹಲವು ರೀತಿಯ ಪೋಷಕಾಂಶಗಳು ದೊರೆಯಲಿದ್ದು, ಇವುಗಳನ್ನು ಬಳಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಸಿರಿಧಾನ್ಯ ಬಳಕೆಯಿಂದ ಮೂಳೆಯು ಸಹ ಗಟ್ಟಿಯಾಗಲಿದೆ. ಕ್ಯಾಲ್ಸಿಯಂ ದೊರೆಯಲಿದೆ. ಆದ್ದರಿಂದ ಸಿರಿಧಾನ್ಯ ಬಳಕೆ ಅತ್ಯಗತ್ಯ ಎಂದರು. ಜಾಥಾದಲ್ಲಿ ಉಪ ನಿರ್ದೇಶಕರಾದ ಸೋಮಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ತಾಂತ್ರಿಕ ಸಹಾಯಕರು, ಎನ್‍ಸಿಸಿ ವಿದ್ಯಾರ್ಥಿಗಳು, ಕೃಷಿಕರು ಇತರರು ಪಾಲ್ಗೊಂಡಿದ್ದರು. ಜಾಥವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನದವರೆಗೆ ನಡೆಯಿತು. ಬಳಿಕ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧಾ ಪ್ರದರ್ಶನ ನಡೆಯಿತು. ಸ್ಪರ್ಧೆಯಲ್ಲಿ 60ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದರು. ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು, ಸಾಮೆ ಮತ್ತಿತರದಿಂದ ಮಾಡಿರುವ ವಿವಿಧ ರೀತಿಯ ತಿಂಡಿ ತಿನಿಸುಗಳು ಪ್ರದರ್ಶನದಲ್ಲಿ ನೋಡುಗರ ಬಾಯಲ್ಲಿ ನೀರು ತರಿಸಿತು. ಸಿರಿಧಾನ್ಯದಲ್ಲಿ ಮಾಡಿದ್ದ ರಾಗಿ ದೋಸೆ, ನಿಪ್ಪಟ್ಟು, ಚಟ್ನಿ, ಚಕ್ಕುಲಿ, ಕೋಡು ಬಳೆ, ಕಜ್ಜಾಯ, ಮಿಲ್ಲೇಟ್ ಪಾಯಸ, ಮಿಲ್ಲೇಟ್ ಪಲಾವ್, ರಾಗಿ ಬಿಸ್ಕೇಟ್, ಬಿಳಿ ಜೋಳದ ಬಿಸ್ಕೇಟ್, ಮಿಲ್ಲೇಟ್ ಕೇಕ್, ಸಿರಿಧಾನ್ಯ ಪಡ್ಡು, ಸಿರಿಧಾನ್ಯ ಲಡ್ಡು, ಸಿರಿಧಾನ್ಯ ಚಟ್ನಿ, ಸೀಮೆಬದನೆ ಕಟ್ಲೆಟ್ಟ್, ನವಣೆ ದೋಸೆ, ಹಲಸಿನ ಕಟ್ಲೆಟ್ಟ್, ಬೂಕಿ ಕಜ್ಜಾಯ, ರಾಗಿ ಲಡ್ಡು, ಗುಳಿಗೆ ಪಾಯಸ, ಸಜ್ಜೆನಾಡು, ನವಣೆ ಕಟ್ಲೆಟ್ಟ್, ಪಪ್ಪಾಯಿ ಹಲ್ವ, ಸಜ್ಜೆ ಹಲ್ವ, ಸಿರಿಧಾನ್ಯ ಒಡೆ, ಮೆಂತ್ಯೆ ಸೊಪ್ಪಿನ ಒಡೆ, ಮೆಂತ್ಯೆ ಹಿಟ್ಟು, ರಾಗಿ ಮತ್ತು ಕ್ಯಾರೇಟ್ ಕೇಕ್, ಶಾಮೆ ಪುಡಿ ಮತ್ತು ಕಾಳುಕಡುಬು, ಹುರಿಕಡಲೆ ಚಿಕ್ಕಿ, ಇರಲೆಕಾಯಿ ಗೊಜ್ಜು, ಗೋದಿ ಹಲ್ವ, ಸಿಹಿ ಕಡುಬು, ನವಣೆ ಬಿಸಿಬೇಳೆ ಬಾತ್, ರಾಗಿ ದೋಸೆ, ನವಣೆ ಉಪ್ಪಿಟ್ಟು, ರಾಗಿ ಹಲ್ವ, ರಾಗಿ ಮಿಕ್ಸರ್, ಕಕ್ಕಡ ಸೊಪ್ಪು ಪಾಯಸ, ಸಿಹಿ ಗೆಣಸು ಖಾರ, ಇರಲೆ ಉಪ್ಪಿನಕಾಯಿ, ನವಣೆ ರೊಟ್ಟಿ, ಶುಂಠಿ ಚಟ್ನಿ, ಕೆಸಸಾರು, ಮಾವಿನಕಾಯಿ ಜೂಸು, ಕುಂಬಳ ಕೊಡಿ ಪಲ್ಯ, ಬರಗು ಒಡೆ, ಸಿರಿಧಾನ್ಯ ನಿಪ್ಪಟ್ಟು, ಅಡಿಕೆ ಪುಟ್ಟು, ನವಣೆ ಬರಗು ಹಲ್ವ, ಪತ್ರೋಡೆ ಬೇಂದಿ ಹೀಗೆ ಹಲವು ಖಾದ್ಯಗಳು ಸ್ಪರ್ಧೆಯಲ್ಲಿ ಗಮನ ಸೆಳೆದವು. ಜಿಲ್ಲಾ ಮಟ್ಟಕ್ಕೆ ಖಾರ ತಿನಿಸು, ಸಿಹಿ ತಿನಿಸು ಮತ್ತು ಮರೆತು ಹೋದ ಖಾದ್ಯಗಳಿಗೆ ಪ್ರತ್ಯೇಕವಾಗಿ ಪ್ರಥಮ ಬಹುಮಾನವಾಗಿ ರೂ. 5 ಸಾವಿರ, ದ್ವಿತೀಯ ಬಹುಮಾನವಾಗಿ ರೂ. 3 ಸಾವಿರ ಹಾಗೂ ತೃತೀಯ ಬಹುಮಾನವಾಗಿ ರೂ. 2 ಸಾವಿರ ನೀಡಲಾಯಿತು.

 

Share. Facebook Twitter Pinterest LinkedIn Tumblr Email WhatsApp
Previous Article*ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ*
Next Article *ಯಲಹಂಕ ಗೌಡ ಸಮಾಜದ 2025–26 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.