Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ.28 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಜ.30 ರಂದು ಹುತಾತ್ಮರ ದಿನ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ*
ಇತ್ತೀಚಿನ ಸುದ್ದಿಗಳು

*ಜ.28 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಜ.30 ರಂದು ಹುತಾತ್ಮರ ದಿನ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ*

January 13, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ಇದೇ ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಾಗೂ ಜ.30 ರಂದು ಹುತಾತ್ಮರ ದಿನ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ರಾಷ್ಟ್ರದ ಪ್ರಥಮ ಸೇನಾ ಮಹಾ ದಂಡನಾಯಕ, ವೀರ ಸೇನಾನಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.  ಸೈನಿಕ ಶಾಲೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‍ಸಿಸಿ ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ನಗರದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಹೂವಿನ ಅಲಂಕಾರ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯವನ್ನು ನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪೊಲೀಸ್ ವಾದ್ಯ ತಂಡದಿಂದ ಗೌರವ ಸಮರ್ಪಣೆ, ರಾಷ್ಟ್ರಗೀತೆ ನುಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.  ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜನರೂ ಪಾಲ್ಗೊಳ್ಳುವಂತಾಗಬೇಕು. ರಾಷ್ಟ್ರದ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು. :: ಹುತಾತ್ಮರ ದಿನ :: ಇದೇ ಜನವರಿ, 30 ರಂದು ಹುತಾತ್ಮರ ದಿನ ಆಯೋಜನೆ ಬಗ್ಗೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಜನವರಿ, 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಹೊರ ತೆಗೆದು ಹೂವಿನ ಅಲಂಕೃತದೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಪೊಲೀಸ್ ವಾದ್ಯದೊಂದಿಗೆ ಗೌರವ ಸಲ್ಲಿಸಿ, ನಂತರ ಜಿಲ್ಲಾಡಳಿತ ಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಮೂಲಕ ಸಾಗಿ ಗಾಂಧಿ ಮಂಟಪದಲ್ಲಿ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ನಂತರ ಪೊಲೀಸ್ ವಾದ್ಯದೊಂದಿಗೆ ಗೌರವ ವಂದನೆ ಸಲ್ಲಿಸಿ, ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಭದ್ರವಾಗಿ ಇಡಲಾಗುತ್ತದೆ. ಈ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ‘ಗಾಂಧಿ ಸ್ಮಾರಕ ಉದ್ಯಾನವನ’ ಕಾಮಗಾರಿ ಅರ್ಧಕ್ಕೆ ನಿಂತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆಯಾಗಿತ್ತು. ಇನ್ನು 55 ಲಕ್ಷ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಯಾವುದೇ ಕಾರ್ಯ ಪ್ರಗತಿ ಆಗದಿರುವುದು ನೋವಿನ ಸಂಗತಿ ಎಂದು ಹೇಳಿದರು.  ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶಾಸಕರು ಅನುದಾನ ಬಿಡುಗಡೆಗೆ ಸತತ ಪ್ರಯತ್ನ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಮುಂದಿನ ಬಜೆಟಿನಲ್ಲಿ ಅನುದಾನ ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.  ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಕಾನೆಹಿತ್ಲು ಮೊಣ್ಣಪ್ಪ, ತಹಶೀಲ್ದಾರ್ ಶ್ರೀಧರ, ಓಂಕಾರೇಶ್ವರ ದೇವಾಲಯದ ಆಡಳಿತಾಧಿಕಾರಿ ದೇವರಾಜು, ಅಂಬೆಕಲ್ಲು ನವೀನ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸ್ವಿಕ್ವೇರಾ, ನಗರಸಭೆಯ ನಿಶಾ, ಇತರರು ಹಲವು ಸಲಹೆ ನೀಡಿದರು.

 

 

 

Share. Facebook Twitter Pinterest LinkedIn Tumblr Email WhatsApp
Previous Article*ಯಲಹಂಕ ಗೌಡ ಸಮಾಜದ 2025–26 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ*
Next Article *ಗೋಣಿಕೊಪ್ಪ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ಸಂಭ್ರಮ : ಕಲಿಕಾ ಹಬ್ಬ ಮಕ್ಕಳ ಆಸಕ್ತಿಯನ್ನು ದ್ವಿಗುಣಗೊಳಿಸುತ್ತದೆ : ಕುಲ್ಲಚಂಡ ಪ್ರಮೋದ್ ಗಣಪತಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.