
ನಾಪೋಕ್ಲು ಜ.14 NEWS DESK : ಬೇತು ಗ್ರಾಮದ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಜ್ಜೇಟ್ಟಿರ ಯಮುನಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ಯಮುನಾ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸನ್ಮಾನ ಮಾಡಿ ಬೀಳ್ಕೊಟ್ಟರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ









