
ನಾಪೋಕ್ಲು ಜ.14 NEWS DESK : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ 17ನೇ ವರ್ಷದ ಸರ್ ಸಿ.ವಿ.ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಬಗ್ಗೆ ಆಸಕ್ತಿ ಹೆಚ್ಚಿಸುವ ಉದ್ದೇಶ ಹೊಂದಿರುವ ಸಮಿತಿ 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದೆ. ನೋಂದಾಯಿಸಿಕೊಳ್ಳಲು ಜ.30 ಕೊನೆಯ ದಿನವಾದೆ. ಮೊದಲ ಹಂತದ ಪರೀಕ್ಷೆ ಫೆ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಅಂತಿಮ ಹಂತದ ಪರೀಕ್ಷೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಫಲಿತಾಂಶ ಅಂದೇ ಸಂಜೆ ಪ್ರಕಟವಾಗಲಿದೆ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 10,000 ರೂ.ದ್ವಿತೀಯ ಸ್ಥಾನ ಪಡೆದವರಿಗೆ 8000ರೂ, ತೃತೀಯ ಸ್ಥಾನ ಪಡೆದವರಿಗೆ 6000 ರೂ. ಹಾಗೂ 10 ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗುವುದು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನಾ ಪತ್ರ ವಿತರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸಿ.ಎಸ್.ಸುರೇಶ್, ಜಿಲ್ಲಾ ಸಂಯೋಜಕರು ಮೊಬೈಲ್ ಸಂಖ್ಯೆ 9900370842, ಜಿಲ್ಲಾ ಘಟಕದ ಅಧ್ಯಕ್ಷೆ ಸರಳ ಕುಮಾರಿ ಎಂ.ಟಿ ಮೊಬೈಲ್ ಸಂಖ್ಯೆ 9483785729 ಹಾಗೂ ಜಿಲ್ಲಾ ಘಟಕದ ಕಾರ್ಯದರ್ಶಿ ಕುಮಾರ್ ಎನ್.ಎಸ್ ಮೊಬೈಲ್ ಸಂಖ್ಯೆ 9483252878 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ








