
ಮಡಿಕೇರಿ ಜ.14 NEWS DESK : ಕುಶಾಲನಗರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಪಿ.ಎಂ.ವರುಣಿಕ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಹತ್ತನೇ ತರಗತಿಯ ವಿದ್ಯಾರ್ಥಿನಿ ಎ.ಎಸ್.ತೃಶಾ ಅಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾಳೆ. ವಿಜೇತ ವಿದ್ಯಾರ್ಥಿಗಳೊಂದಿಗೆ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಬಬ್ಬಿರ ಸ್ವರೂಪ್, ಪ್ರೌಢಶಾಲಾ ಶಿಕ್ಷಕರಾದ ಜೆ.ಆರ್.ಮನೋಜ್ ಕುಮಾರ್, ಬಿ.ಎಸ್. ಸಂಧ್ಯಾ ಹಾಜರಿದ್ದರು.








