
ಮಡಿಕೇರಿ ಜ.14 NEWS DESK : ಮಹಿಳಾ ಶಕ್ತಿಯನ್ನು ಒಗ್ಗೂಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಶಶಿಕಲಾ ತಿಳಿಸಿದ್ದಾರೆ. ಮಡಿಕೇರಿ ನಗರದಲ್ಲಿ ಮಹಿಳಾ ಸಂಘಟನೆಯನ್ನು ಬಲಪಡಿಸಲಾಗುವುದು, ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಪ್ರತಿ ವಾರ್ಡ್‍ಗಳಲ್ಲಿ ಮಹಿಳಾ ಕಾಂಗ್ರೆಸ್ ನ್ನು ಬಲಪಡಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ನನ್ನ ಪಕ್ಷ ನಿಷ್ಠೆಯನ್ನು ಗುರುತಿಸಿ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಸೌಮ್ಯ ರೆಡ್ಡಿ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಲತಾ ಜಿ.ಆರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರು ನನಗೆ ಅಧ್ಯಕ್ಷ ಸ್ಥಾನವನ್ನು ನೀಡಿದ್ದು, ಇವರೆಲ್ಲರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಶಶಿಕಲಾ ತಿಳಿಸಿದ್ದಾರೆ.









