
ನಾಪೋಕ್ಲು ಜ.15 NEWS DESK : ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಬೀರೇಶ್ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಮಿಮಿಕ್ರಿ ಸ್ಪರ್ಧೆಯಲ್ಲಿ ಬೀರೇಶ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟ ಸ್ಪರ್ಧೆಗೆ ಸ್ಥಾನ ಪಡೆದುಕೊಂಡಿದ್ದಾನೆ. ವಿದ್ಯಾರ್ಥಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಿವೈಪಿಸಿ ಸೌಮ್ಯ ಪೆÇನ್ನಪ್ಪ, ಬಿಆರ್‍ಸಿ ಶರ್ಮಿಳ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಿದರು.
ವರದಿ : ದುಗ್ಗಳ ಸದಾನಂದ.








