
ನಾಪೋಕ್ಲು ಜ.15 NEWS DESK : ಮೂರ್ನಾಡು ಪಿಎಂಶ್ರೀ ಸರಕಾರಿ ಪ್ರಾರ್ಥಮಿಕ ಶಾಲೆಗೆ ಗ್ರಾಮ ಪಂಚಾಯತಿ, ವಿವಿಧ ಸಂಘ ಸಂಸ್ಥೆಗಳು ಹಾಗೂ ದಾನಿಗಳಿಂದ ಬ್ಲೂಟೂತ್ ಸ್ಪೀಕರನ್ನು ಕೊಡುಗೆಯಾಗಿ ನೀಡಲಾಯಿತು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಕೆ.ಎ.ಮಜೀದ್, ಆಪ್ತಮಿತ್ರಾ ಬಳಗ, ಗಜಾನನ ಸಂಘ ಮತ್ತು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ಮೂರ್ನಾಡು ಜೊತೆಗೂಡಿ ಶಾಲಾ ವಿದ್ಯಾರ್ಥಿಗಳಿಗೆ ಪೂರಕವಾಗಿರುವ ಬ್ಲೂಟೂತ್ ಸ್ಪೀಕರ್ ಅನ್ನು ನೀಡಿದರು.
ವರದಿ : ದುಗ್ಗಳ ಸದಾನಂದ.









