
ಸುಂಟಿಕೊಪ್ಪ ಜ.15 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಣಕ್ಕೆ ಮಾತ್ರ ಸಿಮೀತವಾಗಿರದೆ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆ ನಡೆಯಿತು. ಮಕ್ಕಳು ತೋಟಗಳಲ್ಲಿ ಬೆಳೆದ ತರಕಾರಿ, ಸೊಪ್ಪು ಕಾಯಿ ಪಲ್ಯಗಳು, ಆಹಾರ ತಿಂಡಿ ತಿನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನಿಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ವ್ಯಾಪಾರಿಗಳ ರೀತಿಯಲ್ಲಿಯೆ ವ್ಯಾಪಾರ ವಹಿವಾಟನ್ನು ನಡೆಸಿ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷರು ಹಾಗೂ ಪಂಚಾಯಿತಿ ಸದಸ್ಯರಾದ ರಫೀಕ್ ಖಾನ್ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಸಾಮಾಜಿಕವಾಗಿ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ. ಮಕ್ಕಳು ಅತ್ಯಂತ ಉತ್ಸಾಹದಿಂದ ವ್ಯಾಪಾರ ವಹಿವಾಟಿಗೆ ಬೇಕಾದ ತರಕಾರಿ, ಸೋಪ್ಪು, ತಿಂಡಿ ತಿನ್ನಿಸುಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ರಫೀಕ್‍ಖಾನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಸರಕಾರವು ಮಕ್ಕಳಿಗೆ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ವ್ಯವಹಾರಿಕ ಜ್ಞಾನದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಮಕ್ಕಳಿಗೆ ಭವಿಷ್ಯದಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು. ಈ ಸಂದರ್ಭ ನಿವೃತ್ತ ಶಾಲಾ ಮುಖ್ಯೋಪಾದ್ಯಾಯನಿ ಗೀತಾ, ಪ್ರಭಾರ ಮುಖ್ಯೋಪಾದ್ಯಾಯರಾದ ದೈಹಿಕ ಶಿಕ್ಷಣ ಶಿಕ್ಷಕ ನಂದ, ಸಹಶಿಕ್ಷಕರುಗಳಾದ ಸೌಭಾಗ್ಯ, ಚಂದ್ರಾವತಿ, ಇಂದಿರಾ, ಉಷಾ, ವರ್ಣಿತ, ಸತೀಶ್, ಮಮತಾ, ಅಸೀನ, ಪುನೀತ, ಅಂಜನ, ಶಾಜಿಯ, ಶೋಭಾ, ಎಸ್‍ಡಿಎಂಸಿ ಸದಸ್ಯರು ಹಾಗೂ ಪೋಷಕರು ಮತ್ತಿತರರು ಇದ್ದರು.










