
ಮಡಿಕೇರಿ ಜ.15 NEWS DESK : ಮಡಿಕೇರಿಯ ಕೊಡಗು ಮಹಿಳಾ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದಮಣಿ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ನಂತರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವ ಕುರಿತು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.









