
ಮಡಿಕೇರಿ ಜ.15 NEWS DESK : ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಭರತ ನಾಟ್ಯದಲ್ಲಿ ಪ್ರಥಮ ಸ್ಥಾನ ಮತ್ತು ಹನಿಯ ಎ. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಹೇಮಂತ್ ಆರ್. ಕಾಮತ್ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕೀರ್ತನ ಜಿ. ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿತಂದಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಸಂಯೋಜಿಕಿ ಅಮೃತ ಅರ್ಜುನ್ ಮತ್ತು ಸಹಶಿಕ್ಷಕಿ ನಿವ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮುಖ್ಯಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಕಿ ಅಮೃತ ಅರ್ಜುನ್ ಹಾಗೂ ಬೋಧಕ ಬೋದಕೇತರ ವೃಂದದವರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದಿಸಿದರು.









