
ಸುಂಟಿಕೊಪ್ಪ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್‍ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವಸಹಾಯ ಸಂಘಗಳಾದ ಜನನಿ, ಮೂಕಾಂಬಿಕಾ ಸಂಘದ ಸದಸ್ಯರು ದೇವಾಲಯದ ಆವರಣ ಹಾಗೂ ಶಾಲಾ ಆವರಣದಲ್ಲಿ ಬೆಳೆದು ನಿಂತ್ತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲು ಒಕ್ಕೂಟದ ಉಪಾಧ್ಯಕ್ಷೆ ಗೀತಾ, ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷ ಖತಿಜಾ ಹಾಗೂ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಶ್ರಮದಾನಕ್ಕೆ ಚಾಲನೆ ನೀಡಿದರು.









