
ಭಾಗಮಂಡಲ NEWS DESK ಜ.15 : ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭಾಗಮಂಡಲ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಭಾಗಮಂಡಲ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದ ಅವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ನಿರ್ದೇಶನ ನೀಡಿದರು. ಇದೇ ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ತಲಕಾವೇರಿ ಉಪ ಠಾಣೆಗೂ ಭೇಟಿ ನೀಡಿ ಪರಿಶೀಲಿಸಿದರು.









