


ಮಡಿಕೇರಿ ಜ.15 NEWS DESK : ತುಮಕೂರಿನಲ್ಲಿ ಜ.16 ರಿಂದ 22ರ ವರೆಗೆ ನಡೆಯಲಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಕೊಡಗನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಎಂ.ಎ.ಮಿಶಾಲ್, ಕೊಡಗು ವಿದ್ಯಾಲಯದ ಎ.ಎಂ.ದಕ್ಷ್ ಸೋಮಯ್ಯ, ಎನ್.ಕೆ.ಪ್ರಜ್ಞಾ, ಮಧುರಾಮ್ ಕೊಡಗನ್ನು ಪ್ರತಿನಿಧಿಸಲಿದ್ದಾರೆ. ಇವರು ಟೆಕ್ವಾಂಡೋ ಕ್ಲಬ್‍ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಪಂದ್ಯಾವಳಿಯಲ್ಲಿ 30 ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಲಿದ್ದು, 27 ಕ್ರೀಡೆಗಳಿರಲಿವೆ ಎಂದು ಕ್ಲಬ್‍ನ ಮಾಸ್ಟರ್ ಕುಶಾಲ್ ಕುಮಾರ್ ತಿಳಿಸಿದ್ದಾರೆ.









