
ಮಡಿಕೇರಿ ಜ.15 NEWS DESK : ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಜ.18 ರಂದು ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಬಿ.ಎಸ್.ಲೀಲಾವತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸೋಲೂರು ಮಠದ ಆರ್ಯ ಈಡಿಗ ಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಿಕೊಂಡಿರುವುದಾಗಿ ಹೇಳಿದರು. ಸಾಧಕರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸನ್ಮಾನಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಹರಿಪ್ರಸಾದ್, ಮಾಜಿ ಸದಸ್ಯ ಹರೀಶ್ ಕುಮಾರ್ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. :: ಪ್ರತಿಭಾ ಪುರಸ್ಕಾರ :: ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿನ ಸಮಾಜದ ಪ್ರತಿಭಾವಂತ 40 ರಿಂದ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗವುದೆಂದು ಮಾಹಿತಿ ನೀಡಿದರು. ::ಸಾಧಕರಿಗೆ ಸನ್ಮಾನ :: ಕಾರ್ಯಕ್ರಮದಲ್ಲಿ ಎಂ.ಟೆಕ್ ಚಿನ್ನದ ಪದಕ ಪಡೆದ ಚೇರಂಬಾಣೆಯ ಬಿ.ಬಿ.ಸೋನ, ಎಂ.ಫಾರ್ಮದಲ್ಲಿ ಚಿನ್ನದ ಪದಕ ಪಡೆದ ಬಿ.ವಿ.ಮಂಜುಶ್ರೀ, ಅಂತರಾಷ್ಟ್ರೀಯ ಕ್ರೀಡಾಪಟು ಮತ್ತು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಜಾಜಿ ಹಾಗೂ ರಾಷ್ಟ್ರೀಯ ವೈದ್ಯಕೀಯ ಸೇವೆ ಹಾಗೂ ಸಂಗೀತ ಪ್ರಶಸ್ತಿ ವಿಜೇತರಾದ ಚಿತ್ರಾ ಆರ್ಯನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು. :: ಶೈಕ್ಷಣಿಕ ನೆರವು :: ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ಸುವರ್ಣ ಅವರು ಜಿಲ್ಲಾ ಸಂಘಕ್ಕೆ ವಿದ್ಯಾರ್ಥಿ ಪುರಸ್ಕಾರಕ್ಕಾಗಿ ನೆರವನ್ನು ಒದಗಿಸಿದ್ದಾರೆ. ಇದನ್ನು ಬಳಸಿಕೊಂಡು ಬಡತನದಲ್ಲಿರುವ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ನೆರವನ್ನು ನೀಡಲಾಗುತ್ತದೆಂದು ತಿಳಿಸಿದರು. :: ಶಾಸಕರಗಳಿಗೆ ಗೌರವ :: ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ನಿವೇಶನಕ್ಕಾಗಿ ಕಳೆದ 23 ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿತ್ತು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪರಿಶ್ರಮದಿಂದ ಮಡಿಕೇರಿ ಸುದರ್ಶನ ವೃತ್ತದ ಬಳಿ 26 ಸೆಂಟ್ ಜಾಗವನ್ನು ಸಂಘಕ್ಕೆ ಮಂಜೂರು ಮಾಡಲಾಗಿದೆ. ಇದಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕೂಡ ಸಹಕಾರ ನೀಡಿದ್ದು, ಈ ಹಿನ್ನೆಲೆ ಇಬ್ಬರನ್ನು ಸನ್ಮಾನಿಸಿ ಗೌರವಿಸಲಾಗವುದೆಂದು ಲೀಲಾವತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ರವೀಂದ್ರ, ನಿಕಟಪೂರ್ವ ಅಧ್ಯಕ್ಷ ಬಿ.ಎಂ.ರಾಜಶೇಖರ್, ಕಾರ್ಯದರ್ಶಿ ಎಂ.ಕೆ.ಮನೋಹರ್ ಸುವರ್ಣ, ಯುವ ಘಟಕದ ಜಿಲ್ಲಾ ಸಂಚಾಲಕ ಬಿ.ಎಂ.ವಿನೋದ್ ಉಪಸ್ಥಿತರಿದ್ದರು.









