
ಮಡಿಕೇರಿ ಜ.15 NEWS DESK : ಸೈಬರ್ ಅಪರಾಧಗಳ ಮೇಲೆ ನಿಗಾ ವಹಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮಡಿಕೇರಿಯಲ್ಲಿರುವ ಸೈಬರ್ ಕ್ರೈಂ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದ ಅವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಸೈಬರ್ ಅಪರಾಧಗಳ ತನಿಖೆಯ ಕುರಿತು ಸೂಕ್ತ ನಿರ್ದೇಶನ ನೀಡಿದರು.









