
ವಾಷಿಂಗ್ಟನ್, ಜ.16 NEWS DESK : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಈ ವೇಳೆ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಟ್ರಂಪ್ ಅವರಿಗೆ ಪ್ರದಾನ ಮಾಡಿದರು. ಈ ಭೇಟಿಯನ್ನು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ದೃಢಪಡಿಸಿದರು.









