
ಕೋಲ್ಕತ್ತ ಜ.16 NEWS DESK : ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳ ಹಿರಿಯ ಮುಖಂಡರು ಹಾಗೂ ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಚಂದ್ರಶೇಖರ್ ಬೋಸ್ ಅವರು ಶುಕ್ರವಾರ ನಿಧನರಾದರು. ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೋಲ್ಕತ್ತದ ಬಿಧಾನ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು ಎಂದು ಸಿಪಿಐ(ಎಂ) ಪಕ್ಷದ ಮೂಲಗಳು ತಿಳಿಸಿವೆ. ದೀರ್ಘ ಕಾಲದಿಂದ ಸಕ್ರಿಯ ರಾಜಕೀಯ ಹಾಗೂ ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಬೋಸ್ ಅವರು, ಶತಾಯುಷಿಯಾಗಿಯೂ ಸಂಘಟನಾ ಚಟುವಟಿಕೆಯಲ್ಲಿ ತೊಡಗಿರುವ ಅಪರೂಪದ ನಾಯಕನಾಗಿದ್ದರು. ಚಂದ್ರಶೇಖರ್ ಬೋಸ್ ಅವರು ತಮ್ಮ ಪುತ್ರ, ಸೊಸೆ ಹಾಗೂ ಮೊಮ್ಮಗನನ್ನು ಅಗಲಿದ್ದಾರೆ.









