Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೀಗೆಹೊಸೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಕಲಿಕಾ ಹಬ್ಬ : ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”: ಹೆಚ್.ಎಸ್.ಚೇತನ್*
ಇತ್ತೀಚಿನ ಸುದ್ದಿಗಳು

*ಸೀಗೆಹೊಸೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಕಲಿಕಾ ಹಬ್ಬ : ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”: ಹೆಚ್.ಎಸ್.ಚೇತನ್*

January 16, 20263 Mins Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.16 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬವು ಸಂಭ್ರಮದಿಂದ‌ ನಡೆಯಿತು. 1 ರಿಂದ 5 ನೇ ತರಗತಿಯವರೆಗಿನ
ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳುಳ್ಳ ಚಟುವಟಿಕೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”. ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಸ್ಥಳೀಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ಮಕ್ಕಳ ಕಲಿಕಾ ಹಬ್ಬ ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಮೂಲಕ ಹೆಚ್ಚು ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದು ಚೇತನ್ ಹೇಳಿದರು.  ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ , ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ’ ಎಂದರು.  ಶೈಕ್ಷಣಿಕ ಪರಿಸರದ ಬೆಂಬಲ ವ್ಯವಸ್ಥೆ ಗಟ್ಟಿಯಾದರೆ ಮಕ್ಕಳಿನ ಕಲಿವಿನ ಫಲ ವೃದ್ಧಿಯಾಗುತ್ತದೆ ಎಂದರು. ಕಲಿಕಾ ಹಬ್ಬದಲ್ಲಿ ಮಕ್ಕಳ ಕಲಿಕಾ ಪ್ರೇರಣೆ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,  ವಿದ್ಯಾರ್ಥಿಗಳ ಕಲಿಕಾ ಮಟ್ಡವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣಯು ಹಮ್ಮಿಕೊಂಡಿರುವ ವಿಶಿಷ್ಡ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಕ್ರಿಯಾಶೀಲ ಕಲಿಕಾ ಪ್ರೇರಣೆಯೊಂದಿಗೆ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಕಾರಿಯಾಗಿವೆ ಎಂದರು.  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಎಸ್.ಎ.ಯೋಗೇಶ್ ಮಾತನಾಡಿ,  ಮಕ್ಕಳ ಕಲಿಕಾ ಹಬ್ಬವು ವಿಶಿಷ್ಟವಾದ ಮತ್ತು ಚಟುವಟಿಕೆಯಾಧಾರಿತ ಕೌಶಲ್ಯಪೂರ್ಣ ಕಾರ್ಯಕ್ರಮವಾಗಿದೆ ಎಂದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಬೆಳೆಸಲು
ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದರು.  ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್ ಮಾತನಾಡಿ,
ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಜತೆಗೆ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದರು. ಕಲಿಕಾ ಹಬ್ಬದ ಉದ್ದೇಶ ತಿಳಿಸಿದ ಸಿ ಆರ್ ಪಿ ಕೆ.ಶಾಂತಕುಮಾರ್ , ಕ್ಲಸ್ಟರ್ ಹಂತದ ಶಾಲೆಗಳು ತಮ್ಮೊಳಗಿರುವ ಉತ್ತಮ ಅಭ್ಯಾಸಗಳನ್ನು ಪರಸ್ಪರ ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು. ಸರ್ಕಾರಿ ಪ್ರಾಥಮಿಕ ಶಾಲೆಯ 1 ರಿಂದ 5 ನೇ ತರಗತಿ ಮಕ್ಕಳಿಗೆ “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ( ಎಫ್.ಎಲ್.ಎನ್):( ಈ.ಐ.ಓ.: Foundation literacy and Numeracy) ಚಟುವಟಿಕೆಗಳ ಬಲವರ್ಧನೆಗೆ “ಕಲಿಕಾ ಹಬ್ಬ ” ನಡೆಸಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷೆ ಧರಣಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಶಿಕ್ಷಕರೊಂದಿಗೆ ಪಾಲಕರು ಮತ್ತು ಸಮುದಾಯ ಒಟ್ಟಾಗಿ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕಲಿಕಾ ಹಬ್ಬದ ವ್ಯವಸ್ಥೆ ಕುರಿತು ಶಾಲಾ ಮುಖ್ಯ ಶಿಕ್ಷಕಿ ತಾರಾಮಣಿ ಮಾಹಿತಿ ನೀಡಿದರು. ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಶಿವಶಂಕರ್, ಶಾಲಾ ಶಿಕ್ಷಕರಾದ ಎಚ್.ವಿ.ಲತಾಮಣಿ, ಎಸ್.ಸಿ.ಶ್ವೇತ, ಮಹದೇವಕುಮಾರ್, ನಿವೃತ್ತ ಶಿಕ್ಷಕಿ ಟಿ.ಎಸ್.ವಿನೋದ, ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರು, ಎಸ್ ಡಿ ಎಂ ಸಿ ಸದಸ್ಯರಾದ ಧನಂಜಯ,  ಚೇತನ್ , ಮಂಜೇಶ , ಮಣಿ, ಜ್ಯೋತಿ, ಕೃಷಿಕರಾದ ಗುರುಪಾದಸ್ವಾಮಿ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. :: ಮಕ್ಕಳಿಂದ ಪ್ರತಿಭಾ ಪ್ರದರ್ಶನ ::  ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯಿಂದ‌ ಬಂದಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಂದ ಶಿಕ್ಷಕರ ಜತೆ ಆಗಮಿಸಿದ್ದ ಮಕ್ಕಳು ತಾವು ಕಲಿತ್ತಿದ್ದ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಪಾಲ್ಹೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಲಿಕಾ ಹಬ್ಬದಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಕಾಗದದ ಟೋಪಿ ಧರಿಸಿ ಗಮನ ಸೆಳೆದರು. “ಪ್ರಶ್ನೆಯು ಪ್ರಜ್ಞೆಯಾಗಲಿ” ಎಂಬ ಆಶಯದೊಂದಿಗೆ  ಹಮ್ಮಿಕೊಳ್ಳಲಾಗಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ 13 ಸರ್ಕಾರಿ ಪ್ರಾಥಮಿಕ ಶಾಲೆಗಳ
1 ರಿಂದ 5 ನೇ ತರಗತಿಯ ಮಕ್ಕಳು ಭಾಗವಹಿಸಿದ್ದರು. ಶಾಲಾ ಅಂಗಳದಲ್ಲಿ ಇಡಲಾಗಿದ್ದ ಸೆಲ್ಪಿ ಕಾರ್ನರ್ ನಲ್ಲಿ ಮಕ್ಕಳು ಮತ್ತು ಪೋಷಕರು‌ ಮುಗಿಬಿದ್ದು ತಮ್ಮ ಛಾಯಚಿತ್ರಗಳನ್ನು ತೆಗೆಸಿಕೊಳ್ಳುತ್ತಿದ್ದುದು ಗೋಚರಿಸಿತು.

16-01-2026  

 

Share. Facebook Twitter Pinterest LinkedIn Tumblr Email WhatsApp
Previous Article*ಯಶಸ್ವಿನಿ ಯೋಜನೆ : ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ಅವಕಾಶ*
Next Article *ಹೆಬ್ಬಾಲೆಯಲ್ಲಿ ನೂತನ ಸ್ತ್ರೀ ಶಕ್ತಿ ಭವನ ಉದ್ಘಾಟನೆ : ದೇಶದ ಸಂಸ್ಕೃತಿ, ಪರಂಪರೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರ : ಸಂಸದ ಯದುವೀರ್ ಒಡೆಯರ್*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.