Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಬ್ಬಾಲೆಯಲ್ಲಿ ನೂತನ ಸ್ತ್ರೀ ಶಕ್ತಿ ಭವನ ಉದ್ಘಾಟನೆ : ದೇಶದ ಸಂಸ್ಕೃತಿ, ಪರಂಪರೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರ : ಸಂಸದ ಯದುವೀರ್ ಒಡೆಯರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಬ್ಬಾಲೆಯಲ್ಲಿ ನೂತನ ಸ್ತ್ರೀ ಶಕ್ತಿ ಭವನ ಉದ್ಘಾಟನೆ : ದೇಶದ ಸಂಸ್ಕೃತಿ, ಪರಂಪರೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರ : ಸಂಸದ ಯದುವೀರ್ ಒಡೆಯರ್*

ಜನವರಿ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.16 NEWS DESK : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರಿಕಲ್ಪನೆಯ ನಾರಿ ಶಕ್ತಿಯೊಂದಿಗೆ ವಿಕಸಿತ ಭಾರತ ನಿರ್ಮಾಣ ಪ್ರಗತಿ ದಾಯಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಹಿಳಾ ಶಕ್ತಿಗೆ ಬೇಕಾದ ಕಟ್ಟಡಗಳ ನಿರ್ಮಾಣ ಅವರ ಅಭ್ಯುದಯಕ್ಕೆ ಪೂರಕವಾಗಿವೆ ಎಂದು ಕೊಡಗು ಸಂಸದ ಯದುವೀರ್ ಒಡೆಯರ್ ಹೇಳಿದರು. ಹೆಬ್ಬಾಲೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಎನ್‍ಆರ್‍ಎಲ್‍ಎಂ ಸಂಜೀವಿನಿ ಶೆಡ್ (ಸ್ತ್ರೀ ಶಕ್ತಿ ಭವನ) ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಸಂಸ್ಕೃತಿ, ಪರಂಪರೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರವಿದೆ. ಕೌಶಲ್ಯಾಭಿವೃದ್ದಿಗೆ ಕಟ್ಟಡಗಳು ಪೂರಕವಾಗಿದ್ದು ಸಂಜೀವಿನಿ ಒಕ್ಕೂಟದಲ್ಲಿ ಹೆಬ್ಬಾಲೆ ವ್ಯಾಪ್ತಿಯಲ್ಲಿ 44 ಸಂಘಗಳ 705 ಮಹಿಳಾ ಸದಸ್ಯರಿದ್ದು ಪೂರಕ ಅಭಿವೃದ್ದಿಗೆ ಬಳಸಿಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಯೋಜನೆಯ ಹೆಸರು ಬದಲಾವಣೆ ಮುಖ್ಯವಲ್ಲ. ಗ್ರಾಮೀಣ ಕೌಶಲ್ಯ ಅಭಿವೃದ್ಧಿಗೆ ಬೇಕಾದ ಸವಲತ್ತುಗಳು ಹೊಸ ಹೆಸರಿನಲ್ಲಿ ಅಡಕವಾಗಿದೆ. ಆದರೆ ಕಾಂಗ್ರೆಸ್ ನವರ ಅಪಪ್ರಚಾರ ಸಲ್ಲದು. ಮನರೇಗಾ ಆ ಕಾಲ ಘಟ್ಟಕ್ಕೆ ಆಗಿದ್ದು ಸರಿ. ಆದರೆ ಈಗ ಸ್ವಾವಲಂಬಿಗಳಾಗಲೂ ವಿಜಿರಾಮ್ ಜಿ ಯಂತಹ ಹೊಸ ಹೊಸ ಯೋಜನೆಗಳ ಅನುಷ್ಠಾನ ಹಾಗೂ ಸವಲತ್ತುಗಳು ಅಗತ್ಯವಿದೆ ಎಂದು ಸಂಸದರು ಸಮರ್ಥಿಸಿಕೊಂಡರು. ರಾಜ್ಯ ಸರ್ಕಾರಗಳ ಉಚಿತ ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಮೂಲ ಸೌಕರ್ಯಗಳಾದ ರಸ್ತೆ, ಚರಂಡಿಗಳು ಆಗುತ್ತಿಲ್ಲ ಎಂದು ಸಂಸದರು ವಿಷಾದಿಸಿದರು. ಸುಸಜ್ಜಿತ ರಸ್ತೆಗಳಿಲ್ಲದೇ ಉಚಿತ ಬಸ್ ಕೊಟ್ಟು ಏನು ಪ್ರಯೋಜನವಿಲ್ಲ. ಬಸ್ ನಲ್ಲಿ ಉಚಿತವಾಗಿ ತೆರಳುವವರಿಗೆ ಕೆಲಸಗಳೇ ಇಲ್ಲ ಎಂದು ಸಂಸದರು ಹೇಳಿದರು. ಜಲಜೀವನ್ ಯೋಜನೆಯ ಕುಡಿವ ನೀರಿನ ಸಮರ್ಪಕ ಪೂರೈಕೆಗೆ ಒತ್ತು ನೀಡಲಾಗುತ್ತಿದೆ ಎಂದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಭ್ರೂಣ ದಿಂದ ಬೂದಿಯಾಗುವವರೆಗೂ ಹೆಣ್ಣು ಮಕ್ಕಳು ಈ ಹಿಂದೆ ಸಾಕಷ್ಟು ಶೋಷಣೆಗೆ ಒಳಗಾಗಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಮುನ್ನುಡಿ ಬರೆಯಲಾಯಿತು. ಮರದಡಿ, ಬೇರೆ ಬೇರೆ ಮನೆಯಂಗಳದಲ್ಲಿ ಮಹಿಳಾ ಚಟುವಟಿಕೆ ಗಳ ಮನಗಂಡು ಇಂತಹ ಸ್ತ್ರೀ ಶಕ್ತಿ ಭವನ ನಿರ್ಮಾಣ ಹೆಮ್ಮೆಯ ಸಂಗತಿ. ಅತಿ ದೊಡ್ಡ ಜನಸಂಖ್ಯೆ ಇರುವ ಹೆಬ್ಬಾಲೆ ಗ್ರಾಮದ ವ್ಯಾಪ್ತಿಯ ಜನರಿಗೆ ಉದ್ಯೋಗ ಒದಗಿಸಲು ಕೈಗಾರಿಕಾ ನಿರ್ಮಾಣ, ಶಿಕ್ಷಣ ಸಂಸ್ಥೆಗಳು ಈ ಹಿಂದೆ ಆಗಬೇಕಿತ್ತು. ಆದರೆ, ನಮ್ಮನ್ನಾಳುವ ಜನಪ್ರತಿನಿಧಿಗಳ ಮನಸ್ಥಿತಿ ಯಿಂದಾಗಿ ಈ ಭಾಗ ಅಭಿವೃದ್ಧಿ ಯಿಂದ ಕಡೆಗಣಿಸಿದೆ. ಇದೀಗ ಹೋಬಳಿ ಕೇಂದ್ರವಾಗುವ ಮೂಲಕ ಹೆಬ್ಬಾಲೆ ಗ್ರಾಮ ಸಾಮೂಹಿಕ ಅಭಿಪ್ರಾಯಗಳ ಮೂಲಕ ಸಾಕಷ್ಟು ಅಭಿವೃದ್ದಿಯಾಗಬೇಕು ಎಂದರು. ಜಲಜೀವನ್ ಯೋಜನೆ ಇನ್ನೂ ಕೂಡ ಪೂರ್ಣಗೊಳ್ಳದ ಬಗ್ಗೆ ಹೇಳಿದ ಶಶಿಧರ್, ಈ ಬಗ್ಗೆ ಸಂಸದರು ಹೆಚ್ಚಿನ ಒತ್ತು ನೀಡುವ ಮೂಲಕ ಕೇಂದ್ರದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿದರು. ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಕುಮಾರಿ ಮಾತನಾಡಿ, ಪಿಡಿಒ ಇಲ್ಲದೇ ಪಂಚಾಯಿತಿ ಯಲ್ಲಿ ಸದಸ್ಯರುಗಳ ನಡುವೆ ಸಾಮರಸ್ಯವಿಲ್ಲದೆ ಇನ್ನಷ್ಟು ಒಳ್ಳೆಯ ಕೆಲಸಗಳು ನೆನೆಗುದಿಗೆ ಬಿದ್ದಿವೆ ಎಂದು ವಿಷಾದಿಸಿದರು. ಈ ಭಾಗದ ಮಹಿಳೆಯರಿಗೆ ಅತೀ ಅಗತ್ಯವಿದ್ದ ಸ್ತ್ರೀ ಶಕ್ತಿ ಭವನ ನಿರ್ಮಾಣ ಹೆಮ್ಮೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸಹಾಯಕ ನಿರ್ದೇಶಕ ರಾಕೇಶ್, ಜಿಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶೋಕ್, ಗ್ರಾಪಂ ಉಪಾಧ್ಯಕ್ಷೆ ಲತಾ ತಮ್ಮಯ್ಯ, ಸದಸ್ಯರಾದ ಹೆಚ್.ಸಿ.ಮಹದೇವ, ಮಹೇಶ್, ಚಂದ್ರಶೇಖರ್ ಜೋಗಿ, ನಾರಾಯಣ, ಹೆಚ್.ಪಿ. ತನು ಕುಮಾರ್, ಹೆಚ್.ಬಿ.ರತ್ನಮ್ಮ, ಪುಟ್ಟಲಕ್ಷ್ಮಮ್ಮ, ಯಶಸ್ವಿನಿ, ಪವಿತ್ರ, ಕವಿತಾ, ಪಂಚಾಯಿತಿ ಪಿಡಿಒ ರವಿಕುಮಾರ್, ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್.ರಘು, ಹೆಬ್ಬಾಲೆ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.