
ನಾಪೋಕ್ಲು ಜ.17 NEWS DESK : ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ರೈತ ಭವನದಲ್ಲಿ ನಡೆದ 2025-26ನೇ ಸಾಲಿನ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 63 ವಿದ್ಯಾರ್ಥಿನಿಯರು ಭಾಗವಹಿಸಿದ್ದು 18 ವಿದ್ಯಾರ್ಥಿನಿಯರು ಚಿನ್ನದ ಪದಕ, 22 ವಿದ್ಯಾರ್ಥಿನಿಯರು ಬೆಳ್ಳಿ ಪದಕ ಮತ್ತು 23 ವಿದ್ಯಾರ್ಥಿನಿಯರು ಕಂಚಿನ ಪದಕವನ್ನು ಗೆದ್ದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಕರಾಟೆ ಮಾಸ್ಟರ್ ಯೋಗೇಶ್ ತರಬೇತಿ ಹಾಗೂ ಪ್ರಾಂಶುಪಾಲರಾದ ನೀತಾ ಮತ್ತು ಶಿಕ್ಷಕ ವೃಂದದ ಮಾರ್ಗದರ್ಶನದಿಂದ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.









