Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗಮನ ಸೆಳೆದ ಜಾನಪದ ಕಲಾಪ್ರಕಾರಗಳು : ಗ್ರಾಮೀಣ ಜಾನಪದ ಸಂಸ್ಕೃತಿ, ಕಲೆಯನ್ನು ಪ್ರೋತ್ಸಾಹಿಸಿ : ರಮಾದೇವಿ ಕಳಗಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗಮನ ಸೆಳೆದ ಜಾನಪದ ಕಲಾಪ್ರಕಾರಗಳು : ಗ್ರಾಮೀಣ ಜಾನಪದ ಸಂಸ್ಕೃತಿ, ಕಲೆಯನ್ನು ಪ್ರೋತ್ಸಾಹಿಸಿ : ರಮಾದೇವಿ ಕಳಗಿ*

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಯಕ್ಷಗಾನ, ಡೊಳ್ಳುಕುಣಿತ, ಪೂಜಾಕುಣಿತ, ಜಾನಪದ ಗಾಯನ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಕಲೆಗಳು ನಾಡನ್ನು ಪ್ರತಿಬಿಂಭಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವಂತಾಗಬೇಕು. ಜೊತೆಗೆ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಸಂಪಾಜೆ ಗ್ರಾ.ಪಂ ಅಧ್ಯಕ್ಷರಾದ ರಮಾದೇವಿ ಕಳಗಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಪಾಜೆ ಗ್ರಾಮ ಪಂಚಾಯಿತಿ ಹಾಗೂ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಮಿತಿ ಇವರ ಸಹಯೋಗದೊಂದಿಗೆ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ‘ಸಾಂಸ್ಕøತಿಕ ಸೌರಭ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಂಸ್ಕøತಿಕ ಹಾಗೂ ಜಾನಪದ ಕಲೆಗಳು ನಾಡಿನ ಅಸ್ಮಿತೆಯನ್ನು ಪ್ರತಿಬಿಂಭಿಸುತ್ತಿದ್ದು, ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಲ್ಲಿ ಯುವಜನರು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಯಕ್ಷಗಾನ, ಜಾನಪದ ಸೋಭಾನೆ ಸೇರಿದಂತೆ ಜಾನಪದ ಕಲೆಗಳು ಹಿಂದಿನ ಐತಿಹಾಸಿಕವಾಗಿ ಮಹತ್ವದ ಪರಂಪರೆಯನ್ನು ಹೊಂದಿದ್ದು, ಗ್ರಾಮೀಣ ಪ್ರದೇಶದ ಸೊಗಡನ್ನು ತಿಳಿಸುತ್ತವೆ. ಆ ನಿಟ್ಟಿನಲ್ಲಿ ನಾಡಿನ ವಿವಿಧ ಕಲಾ ಪ್ರಕಾರಗಳಿಗೆ ಉತ್ತೇಜನ ನೀಡುವಂತಾಗಬೇಕು ಎಂದು ಹೇಳಿದರು. ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಬಿ.ಎಸ್.ಲೋಕೇಶ್ ಸಾಗರ್ ಅವರು ಮಾತನಾಡಿ ಕೊಡಗು ಜಿಲ್ಲೆ ಸಾಂಸ್ಕøತಿಕವಾಗಿ ಶ್ರೀಮಂತಿಕೆಯನ್ನು ಹೊಂದಿದ್ದು, ಹಲವು ಜನಪದ ಹಾಗೂ ಸಾಂಸ್ಕøತಿಕ ಕಲಾ ಪ್ರಕಾರಗಳನ್ನು ಕಾಣಬಹುದಾಗಿದೆ ಎಂದು ಹೇಳಿದರು. ಸಾಂಸ್ಕøತಿಕ ಮತ್ತು ಜಾನಪದ ಕಲೆಗಳು ಉಳಿದಲ್ಲಿ ನಾಡಿನ ಸಂಸ್ಕøತಿಯನ್ನು ಉಳಿಸಲು ಸಾಧ್ಯ. ಆ ದಿಸೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿಯೂ ಕಲೆಗಳ ಮಹತ್ವ ಸಾರುವಲ್ಲಿ ಸಾಂಸ್ಕೃತಿಕ ಸೌರಭ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಗಮಕ ಕಲಾವಿದರಾದ ಗಣೇಶ್ ಉಡುಪ ಅವರು ಮಾತನಾಡಿ, ಗಮಕ ಸೇರಿದಂತೆ ಹಲವು ಜಾನಪದ ಕಲೆಗಳು ಅಪರೂಪದಲ್ಲಿ ಅಪರೂಪವಾಗಿದ್ದು, ಸಂಗೀತ ಮತ್ತು ವ್ಯಾಖ್ಯಾನದ ಮೂಲಕ ಗಮಕವನ್ನು ವಾಚಿಸಲಾಗುತ್ತದೆ. ಇದೊಂದು ಅದ್ಭುತ ಎಂದು ವಿವರಿಸಿದರು. ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯಕುಮಾರ್ ಚಿದ್ಕಾರು ಅವರು ಮಾತನಾಡಿದರು. ಬಿ.ಎಸ್.ಲೋಕೇಶ್ ಸಾಗರ್ ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಎಚ್.ಜಿ.ಕುಮಾರ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು. ಕನ್ನಡ ಶಾಸ್ತ್ರೀಯ ಸಂಗೀತವನ್ನು ವಿರಾಜಪೇಟೆಯ ಸ್ವರ್ಣ ಸಂಗೀತ ಶಾಲೆಯ ದಿಲೀಪ್ ಕುಮಾರ್ ತಂಡದವರು ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡಿದರು. ಕುಶಾಲನಗರದ ಕನ್ನಡ ಸಿರಿ ಕಲಾ ವೃಂದದ ಬಿ.ಎಸ್.ಲೋಕೇಶ್ ಸಾಗರ್ ಸುಗಮ ಸಂಗೀತ ಹಾಡಿದರು. ಸೋಮವಾರಪೇಟೆಯ ಹಿರಿಯ ಆಕಾಶವಾಣಿ ಕಲಾವಿದ ಬಿ.ಎ.ಗಣೇಶ್ ಶಾಂತಳ್ಳಿ ಮತ್ತು ತಂಡದವರು ಜಾನಪದ ಗಾಯನ ಹಾಡಿದರು. ಸುಂಟಿಕೊಪ್ಪದ ಕುಮಾರಿ ವಿಧುಷಿ ಸ್ನೇಹಾ ಮತ್ತು ತಂಡದವರು ಭರತನಾಟ್ಯ ನೃತ್ಯ ಪ್ರದರ್ಶಿಸಿದರು. ಮಂಡ್ಯ ಜಿಲ್ಲೆಯ ವೀರಗಾಸೆ ಕುಣಿತದ ಪ್ರದೀಪ್ ಮತ್ತು ತಂಡದವರು ಡೊಳ್ಳು ಕುಣಿತ ಪ್ರದರ್ಶಿಸಿದರು. ಮಂಡ್ಯ ಜಿಲ್ಲೆಯ ಸಂತೋಷ್ ಕೆ.ಪಿ. ಮತ್ತು ತಂಡದವರು ವೀರಗಾಸೆ ಕುಣಿತ ಪ್ರದರ್ಶಿಸಿದರು. ಸುಳ್ಯ ತಾಲ್ಲೂಕಿನ ಯುವಕ ಯಕ್ಷಗಾನ ಕಲಾತಂಡದ ಶೇಖರ್ ಮಣಿಯಾನಿ ಅವರು ಯಕ್ಷಗಾನ ನಾಟ್ಯ ಪ್ರದರ್ಶಿಸಿದರು. ಗಣೇಶ್ ಉಡುಪ ಮತ್ತು ಪ್ರೊ.ಜಿ.ಎನ್.ಅನಸೂಯ ಅವರು ಗಮಕ ಕಾವ್ಯ ಭಾಗ, ಕುಮಾರ ವ್ಯಾಸ ಭಾರತ ವಾಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ…

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.