Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ : ಎಸ್.ಆರ್.ಮೆಹರೋಜ್ ಖಾನ್*
ಇತ್ತೀಚಿನ ಸುದ್ದಿಗಳು

*ಕೊಡಗು : ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ : ಎಸ್.ಆರ್.ಮೆಹರೋಜ್ ಖಾನ್*

January 17, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್‍ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್‍ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ ಶೇ.4.3 ರಷ್ಟು ಇದ್ದದ್ದು ಈಗ ಶೇ.2.5ಕ್ಕೆ ಇಳಿಕೆಯಾಗಿದೆ. ಮಹಿಳೆಯರು ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಶೇ.25 ರಿಂದ 30 ಕ್ಕೆ ಏರಿಕೆಯಾಗಿರುವುದು ವಿಶೇಷವಾಗಿದೆ. ಜೊತೆಗೆ ರಾಷ್ಟ್ರದ ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿರುವುದು ವಿಶೇಷವೇ ಸರಿ ಎಂದು ಮೆಹರೋಜ್ ಖಾನ್ ಅವರು ನುಡಿದರು. ಇಡೀ ದೇಶದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸಿನ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನಿಸಿದೆ. ಜನರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಅವರು ವಿವರಿಸಿದರು. ಜನಪರವಾದ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಪ್ರಣಾಳಿಕೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಅದರಂತೆ ಐದು ಗ್ಯಾರಂಟಿ ಯೋಜನೆಯನ್ನು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಆ ದಿಸೆಯಲ್ಲಿ ಕಾಲಮಿತಿಯಲ್ಲಿ ಸರ್ಕಾರ ಅನುμÁ್ಠನಗೊಳಿಸಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ತಿಳಿಸಿದರು. ರಾಜ್ಯದಲ್ಲಿ ವರ್ಷಕ್ಕೆ ಸರ್ಕಾರ 52 ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗ ಮಾಡುತ್ತದೆ ಎಂದು ವಿವರಿಸಿದ ಮೆಹರೋಜ್ ಖಾನ್ ಅವರು ರಾಜ್ಯದಲ್ಲಿ ಬಡತನ ಪ್ರಮಾಣ ಕಡಿಮೆ ಮಾಡಬೇಕು. ಮಹಿಳೆಯರು ಮತ್ತು ಯುವಜನರಿಗೆ ಶಕ್ತಿ ನೀಡಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು. ಶೇಕಡಾವಾರು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಇದೊಂದು ಸರ್ಕಾರದ ಮಹತ್ವದ ಕಾರ್ಯವಾಗಿದೆ ಎಂದು ಅವರು ಹೆಮ್ಮೆಯಿಂದ ನುಡಿದರು. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣ ಬಳಸಲು ಸಾಧ್ಯವಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದವು. ಆದರೆ ಗ್ಯಾರಂಟಿ ಯೋಜನೆಗಳ ಅನುμÁ್ಠನ ಜೊತೆಗೆ ಅಭಿವೃದ್ಧಿ ಕಾರ್ಯಗಳು ಎಂದಿನಂತೆ ನಡೆಯುತ್ತಿವೆ ಎಂದು ಅವರು ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದಿಗೂ ಸಹ ಬಡತನವಿದ್ದು, ಗ್ಯಾರಂಟಿ ಯೋಜನೆಗಳು ಎಷ್ಟು ಉಪಯುಕ್ತವಾಗಿವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಕರ್ನಾಟಕದ ಎಲ್ಲಾ ಭಾಗದಲ್ಲಿಯೂ ಅಭಿವೃದ್ಧಿ ಆಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಬಡವರಿಗೆ, ಮಹಿಳೆಯರಿಗೆ ಮತ್ತು ಯುವ ಜನರಿಗೆ ಶಕ್ತಿ ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರು ಹೇಳಿದರು. ಗ್ಯಾರಂಟಿ ಯೋಜನೆಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆಯಾಗಿದೆ. ಜೊತೆಗೆ ಗ್ರಾಮೀಣ ಪ್ರದೇಶದಿಂದ ನಗರಪ್ರದೇಶಗಳಿಗೆ ವಲಸೆ ಹೋಗುವವರ ಪ್ರಮಾಣ ಶೇ.15 ರಷ್ಟು ಇಳಿಕೆಯಾಗಿದೆ. ಹಾಗೆಯೇ ಅಪೌಷ್ಠಿಕತೆಯು ಶೇ.50 ರಷ್ಟು ಕಡಿಮೆಯಾಗಿದೆ ಎಂದು ಅವರು ವಿವರಿಸಿದರು. ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆ ವಿನಿಮಯ ಆಗುತ್ತಿದೆ ಎಂದು ನುಡಿದರು. ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆ ಅನುμÁ್ಠನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಮಾತನಾಡಿ ಜಿಲ್ಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯ ರಸ್ತೆ ಅಭಿವೃದ್ಧಿ ಕಾರ್ಯವು ಮೇ ಅಂತ್ಯದೊಳಗೆ ಶೇ.75 ರಷ್ಟು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು ಮಡಿಕೇರಿ-ವಿರಾಜಪೇಟೆ, ವಿರಾಜಪೇಟೆ-ಮಾಕುಟ್ಟ, ವಿರಾಜಪೇಟೆ-ತಿತಿಮತಿ ಸೇರಿದಂತೆ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ ಎಂದರು. ಬಳಿಕ ಸಂವಾದ ಸಂದರ್ಭದಲ್ಲಿ ಪತ್ರಕರ್ತರು ಕೊಡಗು ಜಿಲ್ಲೆಯಲ್ಲಿ ರಸ್ತೆಗಳ ಅಭಿವೃದ್ಧಿಯಾಗಬೇಕು. ಗೃಹಲಕ್ಷ್ಮಿ ಯೋಜನೆ ಹಣ ಪ್ರತೀ ತಿಂಗಳು ಬಿಡುಗಡೆಯಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮಗಳ ಅನುದಾನ ಪರಿಶಿಷ್ಟರಿಗೆ ಬಳಸಬೇಕು. ಮತ್ತಿತರ ಬಗ್ಗೆ ಗಮನಸೆಳೆದರು. ಈ ಕುರಿತು ಪ್ರತಿಕ್ರಿಯಿಸಿದ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ಕೊಡಗಿನಲ್ಲಿ ಶಾಸಕದ್ವಯರ ಪ್ರಯತ್ನದಿಂದ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ರಸ್ತೆ ಸೇರಿದಂತೆ ಆಸ್ಪತ್ರೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದರಿಂದ ಪರಿಸರ ಸಂರಕ್ಷಣೆ ಜೊತೆಗೆ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ಎಸ್‍ಸಿ/ಎಸ್‍ಪಿ ಕಾರ್ಯಕ್ರಮಗಳ ಹಣ ಬಳಕೆ ಸಂಬಂಧ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಚ್.ಟಿ.ಅನಿಲ್ ಸ್ವಾಗತಿಸಿ, ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಿ.ವಿ.ರವಿಕುಮಾರ್, ವೇದಿಕೆಯಲ್ಲಿದ್ದರು. ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಪ್ರಮುಖರಾದ ಮುನೀರ್ ಅಹ್ಮದ್, ಅಂಬೆಕಲ್ಲು ನವೀನ್. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ಕೊಲ್ಯದ ಗಿರೀಶ್ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಗಮನ ಸೆಳೆದ ಜಾನಪದ ಕಲಾಪ್ರಕಾರಗಳು : ಗ್ರಾಮೀಣ ಜಾನಪದ ಸಂಸ್ಕೃತಿ, ಕಲೆಯನ್ನು ಪ್ರೋತ್ಸಾಹಿಸಿ : ರಮಾದೇವಿ ಕಳಗಿ*
Next Article *ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲು*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.