
ಶನಿವಾರಸಂತೆ NEWS DESK ಜ.18 : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟಿನ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ ಅಭಿಪ್ರಾಯ ಪಟ್ಟರು. ಅವರು ಶನಿವಾರಸಂತೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಅನಘ ಪೌಂಡೇಶನ್ ಮತ್ತು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸಿದ್ಧಗಂಗಾ ಶ್ರೀ ಗಳಾದ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ ದಾಸೋಹ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯ ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ನಾನು ಮತ್ತು ಪರೀಕ್ಷೆೆ ಎಂಬ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು-ವಿದ್ಯಾರ್ಥಿಗಳಿ









