
ಮಡಿಕೇರಿ ಜ.19 NEWS DESK : ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಕುಂಡಾಮೇಸ್ತ್ರಿ ಮತ್ತು ಕೂಟುಹೊಳೆ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್. ರಮೇಶ್, ಎಂಜಿನಿಯರ್ಗಳಾದ ಸತೀಶ್, ಹೇಮಂತ್ ಕುಮಾರ್, ಪ್ರಸನ್ನ ಇತರರು ಇದ್ದರು.









