Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದ್ವಿಮುಖ ಸಂಚಾರಕ್ಕೆ ವಿರೋಧ : ವಿರಾಜಪೇಟೆ ವರ್ತಕರ ಸಂಘದಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ*
ಇತ್ತೀಚಿನ ಸುದ್ದಿಗಳು

*ದ್ವಿಮುಖ ಸಂಚಾರಕ್ಕೆ ವಿರೋಧ : ವಿರಾಜಪೇಟೆ ವರ್ತಕರ ಸಂಘದಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ*

January 19, 20262 Mins Read
Facebook WhatsApp Twitter Telegram Copy Link Threads Email LinkedIn Pinterest
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಜ.19 NEWS DESK : ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ದ್ವಿಮುಖ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿ ನಗರದ ವರ್ತಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಶಾಸಕರಿಗೆ ಮನವಿ ಸಲ್ಲಿಸಿ ಮಾಹಿತಿ ನೀಡಿದ ವರ್ತಕರು, ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಏಕಮುಖ ಸಂಚಾರದ ವ್ಯವಸ್ಥೆ ಬಹಳ ವರ್ಷಗಳಿಂದ ಇತ್ತು. ಅಲ್ಲದೆ ತಿಂಗಳ ಹದಿನೈದು ದಿನ ಒಂದು ಬದಿಯಲ್ಲಿ ಇನ್ನು 15 ದಿನ ಮತ್ತೊಂದು ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ಪುರಸಭೆ ಮತ್ತು ನಗರ ಪೆÇಲೀಸರಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು. ವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳಿಗೆ ಯಾವುದೇ ಸಮಸ್ಯೆ ಎದುರಾಗಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಪುರಸಭೆಯು ದ್ವಿಮುಖ ಸಂಚಾರದ ವ್ಯವಸ್ಥೆ ಮಾಡುವುದಾಗಿ ಮಾಹಿತಿ ಬಂದಿದ್ದು ಇದರಿಂದ ವರ್ತಕರಿಗೆ ವ್ಯಾಪಾರ ವಹಿವಾಟು ನಡೆಸಲು ಸಮಸ್ಯೆಯಾಗುತ್ತದೆ. ವಾಹನಗಳ ಪಾರ್ಕಿಂಗ್‍ಗೆ ಅವಕಾಶ ಮಾಡಿಕೊಡಬೇಕು. ಇದೀಗ ಕಾಫಿ ಸೀಸನ್ ಆಗಿರುವುದರಿಂದ ಜನ ವ್ಯಾಪಾರಕ್ಕೆಂದು ಬರುವವರಿದ್ದಾರೆ, ಇಂತಹ ಸಂದರ್ಭದಲ್ಲಿ ಪಾರ್ಕಿಂಗ್‍ಗೆ ಅವಕಾಶ ನೀಡದೆ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಿದ್ದಲ್ಲಿ ವ್ಯಾಪಾರ ವ್ಯವಹಾರಗಳಿಗೆ ಹಿನ್ನಡೆಯಾಗಲಿದೆ ಎಂದು ವರ್ತಕರು ಶಾಸಕರಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ವಿವರಿಸಿದರು. ಸಂಘದ ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಮಾತನಾಡಿ ನಗರದ ಅಭಿವೃದ್ಧಿ ಮಾಡಲು ನಮ್ಮ ಯಾವುದೇ ವಿರೋಧವಿಲ್ಲ. ಆದರೆ ಈ ರೀತಿಯ ನಿರ್ಧಾರದಿಂದ ವರ್ತಕರಿಗೆ ಹಿನ್ನಡೆಯಾಗಲಿದೆ. ವ್ಯಾಪಾರವಿಲ್ಲದೆ ನಷ್ಟ ಅನುಭವಿಸುತ್ತಿರುವ ಅದೆಷ್ಟೋ ವರ್ತಕರುಗಳಿದ್ದಾರೆ. ಇದೀಗ ವ್ಯಾಪಾರ ಮಾಡುವ ಸೀಸನ್ ಆಗಿರುವುದರಿಂದ ಇಂತಹ ಸಂದರ್ಭದಲ್ಲಿ ದ್ವಿಮುಖ ಸಂಚಾರ ಮಾಡಿ ವಾಹನ ನಿಲುಗಡೆಗೆ ಅವಕಾಶ ನೀಡದೆ ಇದ್ದಲ್ಲಿ ವರ್ತಕರಿಗೆ ಇದರಿಂದ ಸಮಸ್ಯೆಯಾಗುತ್ತದೆ. ವಾಹನ ಬೇರೆಡೆ ನಿಲುಗಡೆ ಮಾಡಿ ಬಂದು ವ್ಯಾಪಾರ ಮಾಡುವವರ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಶಾಸಕರು ಇದರ ಬಗ್ಗೆ ಗಮನಹರಿಸಿ ವರ್ತಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಮನವಿ ಮಾಡಿದರು. ವರ್ತಕರ ಸಂಘದ ನಿರ್ದೇಶಕ ಸುರೇಶ್ ಮಾತನಾಡಿ, ಲಕ್ಷಾಂತರ ರೂಪಾಯಿ ಮುಂಗಡ ಹಣವನ್ನು ಕೊಟ್ಟು ಮಾಸಿಕ ಬಾಡಿಗೆಯನ್ನು ನೀಡಿ ಕೆಲಸಗಾರರ ಸಂಬಳವನ್ನು ನೀಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಕೇವಲ ಮಧ್ಯಾಹ್ನದವರಗೆ ಮಾತ್ರ ವ್ಯಾಪಾರ ವಹಿವಾಟು ನಡೆಯುತ್ತದೆ. ಇದರಿಂದ ನಮ್ಮ ಕುಟುಂಬಗಳು ಬದುಕುತ್ತಿವೆ. ದಯವಿಟ್ಟು ಸಹಕಾರ ನೀಡುವಂತೆ ತಿಳಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಪೊನ್ನಣ್ಣ ನಗರದ ಅಭಿವೃದ್ಧಿ ಹೊಂದಲು ಸರಕಾರದ ವತಿಯಿಂದ ವಿವಿಧ ಕಾಮಗಾರಿ ಕಾರ್ಯವನ್ನು ನಿರ್ವಹಿಸಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳಲು ವರ್ತಕರು ಕೂಡ ಸ್ಪಂದಿಸಬೇಕು. ಇದರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಂಘದ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗಳಿಗೆ, ನಗರ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುವ ವೇಳೆ 200 ಕ್ಕೂ ಹೆಚ್ಚು ವರ್ತಕರ ಸಹಿ ಸಂಗ್ರಹ ಮಾಡಲಾಗಿದೆ. ಈ ಸಂದರ್ಭದಲ್ಲಿ ವರ್ತಕರ ಸಂಘದ ಪ್ರಮುಖರಾದ ಮೊಹಮ್ಮದ್ ಹನೀಫ್, ವಿನೋದ್, ಸುನಿಲ್, ಅಬುಸಾಲಿ, ಸುಭಾಷ್, ರಶೀದ್, ಭಗತ್ ಸಿಂಗ್, ಅಬ್ದುಲ್ ರಜಾಕ್, ನಶ್ರುಲ್ಲಾ, ಗಗನ್, ಅಬು ಶಾಲಿ, ಮನ್ಸೂರ್ ನವಾಫ್, ಶಕೀರ್, ಶಭರೀಶ್ ಸೇರಿದಂತೆ ಹಲವಾರು ವರ್ತಕರು ಭಾಗವಹಿಸಿದ್ದರು.

oplus_0

Share. Facebook Twitter Pinterest LinkedIn Tumblr Email WhatsApp
Previous Article*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 
Next Article *ಸಿದ್ದಗಂಗಾ ಭಕ್ತ ಮಂಡಳಿಯಿಂದ ಡಾ.ಶಿವಕುಮಾರ ಸ್ವಾಮೀಜಿ ಸ್ಮರಣೆ : ಡಾ.ಶಿವಕುಮಾರ ಸ್ವಾಮೀಜಿ ವಿಶ್ವಶ್ರೇಷ್ಠ ಸಂತ  : ಡಿವೈಎಸ್ಪಿ ಚಂದ್ರಶೇಖರ್ ಬಣ್ಣನೆ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.