
ಮಡಿಕೇರಿ ಜ.19 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಶಿವಕೇರಿ ಭಾಗದಲ್ಲಿ ಶಾಸಕರ ರೂ.27 ಲಕ್ಷ ವೆಚ್ಚದ ಅನುದಾನದಲ್ಲಿ ಪೂರ್ಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಸೂರಜ್ ಹೊಸೂರು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ಸತೀಶ್, ಅತಿಫ್ ಮನ್ನ, ರಾಕೇಶ್ ಚುಮ್ಮಾ, ಸಚಿನ್, ಪೂರ್ಣಿಮಾ, ಸಂತೋಷ್, ವಿಠಲ, ಶ್ರೀನಿವಾಸ್, ಸಾಗರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.









