
ಮಡಿಕೇರಿ ಜ.19 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜನವರಿ, 20 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮನರೇಗಾ ಕುರಿತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.








