
ಸೋಮವಾರಪೇಟೆ ಜ.20 NEWS DESK : ಕೊಡ್ಲಿಪೇಟೆ ಖ್ಯಾತೆ ಗ್ರಾಮದಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಈ ಶಾಲೆಗೆ ಪ್ರವೇಶ ಆರಂಭವಾಗಿದ್ದು, ಫೆ.15 ಕೊನೆಯ ದಿನಾಂಕವಾಗಿದೆ. ಆಸಕ್ತಿ ಉಳ್ಳವರು ಸ್ಯಾಟ್ಸ್ ನಂಬರ್, ಜಾತಿ ಪ್ರಮಾಣ ಪತ್ರದ ನೋಂದಣಿ ಸಂಖ್ಯೆ, ಆದಾಯ ಪ್ರಮಾಣ ಪತ್ರದ ನೋಂದಣಿ ಸಂಖ್ಯೆಯೊಂದಿಗೆ https;//sevasindhuservices.karnataka.gov.in ಈ ವೆಬ್ ಸೈಟ್ ಮೂಲಕ ಸಲ್ಲಿಸಬೇಕೆಂದು ಶಾಲೆಯ ಪ್ರಾಂಶುಪಾಲರಾದ ಡಾ. ಗುರುಸ್ವಾಮಿಯವರು ತಿಸಿದರು. ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಡಾ. ಮಂತರ್ ಗೌಡ ಅವರು, ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ವಸತಿ ಶಾಲೆಗಳಲ್ಲಿ ಬಡಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ನಮ್ಮ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಮೊದಲಿಗೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನದಾಗಿ ಅವಕಾಶ ಕೊಡಬೇಕು ಎಂದರು. ಈ ಶಾಲೆಯಲ್ಲಿ ಸಿಬಿಎಸ್‍ಇ ಪಠ್ಯಕ್ರಮ ಒಳಗೊಂಡಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡೆದು ಪಡೆದುಕೊಳ್ಳಬೇಕು, ಈ ಶಾಲೆಯಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣದ ಸುವರ್ಣ ಅವಕಾಶ ಕಲ್ಪಿಸಿರುವುದರಿಂದ ಪೋಷಕರು ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು. ವಸತಿ ಶಾಲೆಯ ಪ್ರಾಂಶುಪಾಲರಾದ ಡಾ. ಗುರುಸ್ವಾಮಿ ಮಾತನಾಡಿ, ನಮ್ಮ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಯ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಸಾಧನೆಯಾಗಿದೆ ಶಾಲೆಯಲ್ಲಿ ನುರಿತ ಅನುಭವಿ ವಿಷಯವಾರು ಉಪನ್ಯಾಸಕ ಉಪನ್ಯಾಸಕಿಯರು ಕಾರ್ಯನಿರ್ವಹಿಸುತ್ತಿದ್ದು, ಸುಸಜ್ಜಿತ ಗ್ರಂಥಾಲಯ ಸಭಾಂಗಣ ವಿಜ್ಞಾನ ಪ್ರಯೋಗಾಲಯ ಮತ್ತು ಉತ್ತಮ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖವಾಗಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿಇಟಿ. ಜೆಇ. ನೀಟ್ ಪರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಉಚಿತ ಕೋಚಿಂಗ್ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಹಿಂದುಳಿದ ವರ್ಗಗದ ಇಲಾಖೆಯ ಹಾಗೂ ಶಾಲೆಯ ಸಿಬ್ಬಂದಿಗಳಾದ ಬಿ.ಎಸ್.ನಂಜುಂಡಸ್ವಾಮಿ, ವಶೀಮ ಬಾನು, ಮಂಜುನಾಥ್, ಪವನ್ ಇದ್ದರು.









