Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *2026-27ನೇ ಸಾಲಿನ ಕರಡು ಅಭಿವೃದ್ಧಿ ಯೋಜನೆ : 1,27,191 ಲಕ್ಷ ರೂ. ಕ್ರಿಯಾಯೋಜನೆ ಮಂಡನೆ : ಮೂಲಭೂತ ಸೌಲಭ್ಯಗಳಿಗೆ ಆದ್ಯತೆ : ಸಚಿವ ಎನ್.ಎಸ್.ಭೋಸರಾಜು ಭರವಸೆ*
ಇತ್ತೀಚಿನ ಸುದ್ದಿಗಳು

*2026-27ನೇ ಸಾಲಿನ ಕರಡು ಅಭಿವೃದ್ಧಿ ಯೋಜನೆ : 1,27,191 ಲಕ್ಷ ರೂ. ಕ್ರಿಯಾಯೋಜನೆ ಮಂಡನೆ : ಮೂಲಭೂತ ಸೌಲಭ್ಯಗಳಿಗೆ ಆದ್ಯತೆ : ಸಚಿವ ಎನ್.ಎಸ್.ಭೋಸರಾಜು ಭರವಸೆ*

January 20, 20265 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.20 NEWS DESK : 2026-27ನೇ ಸಾಲಿನಲ್ಲಿ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಂಬಂಧ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸುಮಾರು 1,27,191.24 ಲಕ್ಷ ರೂ. ಕ್ರಿಯಾಯೋಜನೆಯನ್ನು ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಂಡಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವರಾದ ಎನ್.ಎಸ್.ಭೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ ಎಂದರು. ಅದರಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ, ಸರ್ಕಾರಿ ಕಚೇರಿ ಕಟ್ಟಡಗಳ ಅಭಿವೃದ್ಧಿ ಹಾಗೂ ಅಗತ್ಯವಿರುವ ಕಡೆ ಸಾರ್ವಜನಿಕ ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ನಿರ್ಮಾಣ, ಸಾರಿಗೆ ಸಂಪರ್ಕ, ವಿದ್ಯಾರ್ಥಿ ನಿಲಯಗಳ ಆರಂಭ, ವಸತಿ ಯೋಜನೆ, ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಸಂಬಂಧ ಕ್ರೀಯಾಯೋಜನೆ ತಯಾರಿಸಿ ನಿಖರ ಮಾಹಿತಿ ಒದಗಿಸುವಂತೆ ಎನ್.ಎಸ್.ಭೋಸರಾಜು ಅವರು ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಆಗಬೇಕಿರುವ ಕೆಲಸಗಳ ಸಂಬಂಧ ಕ್ರಿಯಾಯೋಜನೆ ತಯಾರಿಸಿ ಬೆಳಕು ಚೆಲ್ಲುವಂತಾಗಬೇಕು. ಈ ಸಂಬಂಧ ಸರ್ಕಾರದ ಹಂತದಲ್ಲಿ ಅನುದಾನ ಬಿಡುಗಡೆಗೆ ಆಗಲಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಸಚಿವರು ನಿರ್ದೇಶನ ನೀಡಿದರು. ಇಲಾಖೆಗಳು ಆದ್ಯತೆ ಮೇಲೆ ಕಾರ್ಯಕ್ರಮ ರೂಪಿಸಬೇಕು. ಎಲ್ಲರೂ ಒಳಗೊಳ್ಳುವಂತೆ ಇರಬೇಕು. ಸಾರ್ವಜನಿಕರಿಗೆ ಸ್ಪಂದನೆ ಅತೀ ಮುಖ್ಯ ಎಂದು ಹೇಳಿದರು. ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಉಪ ಕೇಂದ್ರಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಕೊಡಗು ಜಿಲ್ಲೆಗೆ ಉತ್ತಮ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತಾಗಬೇಕು, ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮುಂದಿನ ಆರ್ಥಿಕ ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳ ಸಂಬಂಧ ಯಾವ ರೀತಿ ಯೋಜನೆ ರೂಪಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಇರಬೇಕು. ರಸ್ತೆ, ಸೇತುವೆ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಖರ ಅಂಕಿ ಅಂಶ ಒದಗಿಸಬೇಕು ಎಂದರು. ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಬಡ ಕುಟುಂಬಗಳಿಗೆ ಬಿಪಿಎಲ್ ನಿಂದ ಎಪಿಎಲ್‍ಗೆ ಬದಲಾಗಿದ್ದಲ್ಲಿ ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕ್ರಿಯಾಯೋಜನೆ ತಯಾರಿಸುವ ಸಂಬಂಧ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಸರ್ಕಾರದ ಯೋಜನೆಗಳು ವೈಜ್ಞಾನಿಕವಾಗಿರಬೇಕು. ಸಾರ್ವಜನಿಕವಾಗಿರಬೇಕು. ಎಲ್ಲರಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ವರದಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಬದಲಾಗಿರುವ ಕಾರ್ಡುಗಳನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ತಾಲ್ಲೂಕುವಾರು ಮಾಹಿತಿ ನೀಡಬೇಕು. ಆ ನಿಟ್ಟಿನಲ್ಲಿ ಸರಿಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕರಡು ಅಭಿವೃದ್ಧಿ ಯೋಜನೆಗಳನ್ನು ಕ್ರೋಢೀಕರಿಸಲು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯೋಜನಾ ಸಮಿತಿಯನ್ನು ಸರ್ಕಾರ ರಚಿಸಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಯೋಜನಾ ಸಮಿತಿ ಸದಸ್ಯರಾದ ರಾಜೇಶ್ ಯಲ್ಲಪ್ಪ ಅವರು ಮಾತನಾಡಿ ಚುನಾವಣೆ ಮೂಲಕ ನೂತನ ಸದಸ್ಯರು ಆಯ್ಕೆಯಾಗಿದ್ದು, ಯೋಜನೆ ಸಂಬಂಧ ಅಧ್ಯಯನ ಮಾಡಬೇಕಿದೆ. ಆ ನಿಟ್ಟಿನಲ್ಲಿ ಒಂದು ವಾರಗಳ ಕಾಲಾವಕಾಶ ನೀಡಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಈ ಯೋಜನಾ ಸಮಿತಿ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತಾಗಬೇಕು, ಜೊತೆಗೆ ದೂರದೃಷ್ಟಿ ಇರಬೇಕು ಎಂದು ಸಲಹೆ ಮಾಡಿದರು. ಹೊಸ ಕ್ರಿಯಾಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಬೇಕು. ಇದು ಪ್ರಗತಿ ಪರಿಶೀಲನಾ ಸಭೆಯಲ್ಲ ಎಂದು ತಿಳಿಸಿದರು. ಮತ್ತೊಬ್ಬ ಸಮಿತಿ ಸದಸ್ಯ ಬಾಲಚಂದ್ರನ್ ನಾಯರ್ ಅವರು ಮಾತನಾಡಿ ಕರಿಕೆ ಗ್ರಾಮದಲ್ಲಿ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಆಗಬೇಕು. ಜೊತೆಗೆ ವೈದ್ಯರನ್ನು ನೇಮಿಸುವಂತಾಗಬೇಕು ಎಂದು ಕೋರಿದರು.
ಕೆಲವು ಕಡೆ ಸರ್ಕಾರಿ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿಗಳು ನಡೆಯುತ್ತಿದ್ದು. ಅಂತಹ ಕಡೆಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಆಗಬೇಕು. ಹಾಗೆಯೇ ಅಗತ್ಯವಿರುವ ಕಡೆ ಹೊಸ ಅಂಗನವಾಡಿ ಆರಂಭಿಸುವಂತಾಗಬೇಕು. ಎಂದು ಸದಸ್ಯರು ಸಲಹೆ ಮಾಡಿದರು. ಹಾಸ್ಟೆಲ್‍ಗೆ ಸ್ವಂತ ಕಟ್ಟಡ ನಿರ್ಮಾಣ ಆಗಬೇಕು ಎಂದು ಸಲಹೆ ಮಾಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ವಿವಿಧ ಕಾಲೋನಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನಿಗದಿ ಮಾಡಬೇಕು ಎಂದು ಸಲಹೆ ಮಾಡಿದರು. ಸದಸ್ಯರಾದ ಮನ್ಸೂರ್ ಅವರು ಮಾತನಾಡಿ ಯಾವುದೇ ಕ್ರಿಯಾಯೋಜನೆ ತಯಾರಿಸುವಾಗ ಹೆಚ್ಚಿನ ಅನುದಾನ ಪ್ರಸ್ತಾವನೆ ಸಲ್ಲಿಸುವಂತಾಗಬೇಕು. ಗದ್ದಿಗೆಯ ಉದ್ಯಾನವನವಿದ್ದು, ನಿರ್ವಹಣೆಯನ್ನು ಇನ್ನಷ್ಟು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್ ಅವರು ಮಾತನಾಡಿ ರಾಜಾಸೀಟು ಉದ್ಯಾನವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದು, ವಾಹನಗಳ ನಿಲುಗಡೆಗೆ ತುಂಬಾ ತೊಂದರೆ ಇದೆ. ಆದ್ದರಿಂದ ಸೂಕ್ತ ಸ್ಥಳ ಕಲ್ಪಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಈ ಕುರಿತು ಧ್ವನಿಗೂಡಿಸಿದ ಸಮಿತಿ ಸದಸ್ಯರಾದ ರಾಜೇಶ್ ಯಲ್ಲಪ್ಪ ಅವರು ರಾಜಾಸೀಟು ಉದ್ಯಾನವನದಲ್ಲಿ ಶೌಚಾಲಯ ನಿರ್ಮಾಣ ಆಗಬೇಕು. ಪಾರ್ಕಿಂಗ್ ಸಮಸ್ಯೆ ನಿವಾರಿಸಬೇಕು ಎಂದು ಕೋರಿದರು. ಸಮಿತಿ ಸದಸ್ಯರಾದ ಕೊಲ್ಲಿರ ಬೋಪಣ್ಣ ಅವರು ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ ಪಶುಪಾಲನಾ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದ್ದು, ಇಲ್ಲಿ ಕಟ್ಟಡ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸಲಹೆ ಮಾಡಿದರು. ಬರಪೊಳೆಯಿಂದ ನೀರು ಕೇರಳಕ್ಕೆ ಹೋಗುತ್ತಿದ್ದು, ಈ ನೀರನ್ನು ಕೊಡಗು ಜಿಲ್ಲೆಗೆ ಬಳಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಮಾತನಾಡಿ ಜಿಲ್ಲೆಯ ಕೆಲವು ಭಾಗದಲ್ಲಿ 9-10 ಅಡಿ ರಸ್ತೆ ಇದ್ದು, ಚರಂಡಿ ನಿರ್ಮಿಸದೆ ರಸ್ತೆಗಳು ಹಾಳಾಗುತ್ತಿವೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಪಡಿತರ ಚೀಟಿ ಸಂಬಂಧ ವಿಷಯ ಪ್ರಸ್ತಾಪಿಸಿದರು. ಕ್ರೀಯಾ ಯೋಜನೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಮಧ್ಯಾಹ್ನ ಉಪಾಹಾರ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಜಯ್, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಶೈಲಜ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿ.ಪಂ. ಉಪಕಾರ್ಯದರ್ಶಿ ಚಂದ್ರಶೇಖರ, ತಹಶೀಲ್ದಾರರು, ತಾ.ಪಂ.ಇಒಗಳು, ಅಧಿಕಾರಿಗಳು ಇದ್ದರು. *ಅಭಿವೃದ್ಧಿ ಸಮಿತಿಗಳ ರಚನೆ* ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಗಳನ್ನು ರಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಭೆ ನಡೆಯಲಿದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪ್ರತೀ ವಾರ್ಡ್‍ಗಳಲ್ಲಿ ಸ್ಥಳೀಯ ಅವಶ್ಯಕತೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನಸಂಪರ್ಕ ಮುಖಾಂತರ ಸಿದ್ಧಪಡಿಸಿ ಗ್ರಾಮ ಸಭೆಗಳಲ್ಲಿ ಚರ್ಚಿಸಿ ಅಭಿವೃದ್ಧಿ ಯೋಜನೆಯನ್ನು ಪ್ರತೀ ಗ್ರಾ.ಪಂ. ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಹಂತದಲ್ಲಿ ಸಿದ್ಧಪಡಿಸಬೇಕಿದೆ. ಸಿದ್ಧಪಡಿಸಲಾದ ಸ್ಥಳೀಯ ಸಂಸ್ಥೆಗಳ ಕರಡು ಅಭಿವೃದ್ಧಿ ಯೋಜನೆಗಳನ್ನು ತಾಲ್ಲೂಕು ಪಂಚಾಯಿತಿಗೆ ಕಳುಹಿಸಬೇಕು. ಶಾಸಕರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ತಾಲ್ಲೂಕು ಯೋಜನೆ ಹಾಗೂ ಅಭಿವೃದ್ಧಿ ಸಮಿತಿಯಲ್ಲಿ ಮಂಡಿಸಿ ಜಿಲ್ಲಾ ಯೋಜನಾ ಸಮಿತಿಗೆ ಸಲ್ಲಿಸಬೇಕಿದೆ.
ಜಿಲ್ಲಾ ಯೋಜನಾ ಸಮಿತಿಯು ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯಿಂದ ಸ್ವೀಕೃತವಾಗುವ ಯೋಜನಾ ವರದಿಯನ್ನು ಕ್ರೋಢೀಕರಿಸಿ ಸ್ಥಳೀಯ ಸಂಪನ್ಮೂಲ ಮತ್ತು ಸರ್ಕಾರದ ಅನುದಾನವನ್ನು ಗಮನದಲ್ಲಿರಿಸಿಕೊಂಡು ಇಡೀ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಾರ್ಷಿಕ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಲಾಗುತ್ತದೆ. ಯೋಜನೆಯನ್ನು ಸಿದ್ಧಪಡಿಸುವಾಗ ಗ್ರಾ.ಪಂ.ಹಂತದಿಂದ ಜಿಲ್ಲಾ ಪಂಚಾಯತ್ ಹಂತದವರೆಗೆ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಸಿದ್ಧಪಡಿಸಬೇಕು. ಗ್ರಾಮಸ್ಥರ ನೈಜ ಆಶೋತ್ತರಗಳನ್ನು ಒಳಗೊಂಡಿರುವ ಯೋಜನೆಯು ವಾರ್ಡ್ ಸಭೆ, ಗ್ರಾಮ ಸಭೆಗಳಿಂದ ರೂಪುಗೊಂಡು ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಜಿಲ್ಲಾ ಯೋಜನಾ ಸಮಿತಿಯಲ್ಲಿ ಮಂಡಿಸಿ ಜಿಲ್ಲಾ ಯೋಜನೆ ತಳಮಟ್ಟದಿಂದ ಮೇಲ್ಪಟ್ಟದ ಮಾದರಿಯಲ್ಲಿ ರಚನೆಯಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಲಾವಣ್ಯ ಬೋರ್ಕರ್ ಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*
Next Article *ಕೇಂದ್ರ ಸರಕಾರದಿಂದ ಗ್ರಾ.ಪಂ ಗಳ ಅಧಿಕಾರ ಮೊಟಕು : ಕೊಡಗು ಜಿಲ್ಲಾ ಸಚಿವ ಎನ್.ಎಸ್.ಭೋಸರಾಜು ಆರೋಪ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.