


ಮಡಿಕೇರಿ ಜ.20 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 09 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.








