
ನಾಪೋಕ್ಲು ಜ.21 NEWS DESK : ಸಂಕ್ರಾಂತಿ ಸಂಭ್ರಮ 2026 ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಕಲ್ಲಪಳ್ಳಿ ಗ್ರಾಮ ಒಳಗೊಂಡ ಪುರುಷರ ಗ್ರಾಮವಾರು ಕಬ್ಬಡಿ ಪಂದ್ಯಾವಳಿ ಮತ್ತು ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ನಡೆದ ಸಂಕ್ರಾಂತಿ ಸಂಭ್ರಮ-2026. ಪೆರಾಜೆ ಕುಂಬಳಚೇರಿ ಸ.ಮಾ.ಪ್ರಾ ಶಾಲಾ ಮೈದಾನದಲ್ಲಿ ಜರುಗಿತ್ತು. ಕ್ರೀಡಾಕೂಟದಲ್ಲಿ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಾಗಬ್ರಹ್ಮ ಕೊಡಿಯಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.
ವರದಿ : ದುಗ್ಗಳ ಸದಾನಂದ.









