Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುರುಷರಲ್ಲಿ ಹೆಚ್ಚುತ್ತಿರುವ ಪ್ರಾಸ್ಟೇಟ್ ಮತ್ತು ಮೂತ್ರಪಿಂಡ ಸಮಸ್ಯೆ : ನಿರ್ಲಕ್ಷ್ಯ ಬೇಡ, ಜಾಗೃತೆ ಇರಲಿ : ಮಣಿಪಾಲ್ ವೈದ್ಯರ ಸಲಹೆ*
ಇತ್ತೀಚಿನ ಸುದ್ದಿಗಳು

*ಪುರುಷರಲ್ಲಿ ಹೆಚ್ಚುತ್ತಿರುವ ಪ್ರಾಸ್ಟೇಟ್ ಮತ್ತು ಮೂತ್ರಪಿಂಡ ಸಮಸ್ಯೆ : ನಿರ್ಲಕ್ಷ್ಯ ಬೇಡ, ಜಾಗೃತೆ ಇರಲಿ : ಮಣಿಪಾಲ್ ವೈದ್ಯರ ಸಲಹೆ*

January 21, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.21 NEWS DESK : ಭಾರತದಾದ್ಯಂತ ಲಕ್ಷಾಂತರ ಪುರುಷರಲ್ಲಿ ಪ್ರಾಸ್ಟೇಟ್ ಮತ್ತು ಮೂತ್ರಪಿಂಡ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಕಾಯಿಲೆಗಳ ಲಕ್ಷಣಗಳು ತೀವ್ರವಾಗುವ ಮುನ್ನವೇ ಎಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಕಿಡ್ನಿ ಟ್ರಾನ್ಸ್‍ಪ್ಲಾಂಟ್ ಸರ್ಜನ್ ಹಾಗೂ ಯುರಾಲಜಿ ಮತ್ತು ಆಂಡ್ರಾಲಜಿ ವಿಭಾಗದ ಕನ್ಸಲ್ಟಂಟ್ ಡಾ.ಕೆ.ಎ.ತಿಮ್ಮಯ್ಯ ಹಾಗೂ ಕಿಡ್ನಿ ಟ್ರಾನ್ಸ್‍ಪ್ಲಾಂಟ್ ಫಿಸಿಶಿಯನ್ ಹಾಗೂ ನೆಫ್ರಾಲಜಿ ವಿಭಾಗದ ಕನ್ಸಲ್ಟಂಟ್ ಡಾ.ಪಿ.ಟಿ.ವಿಪಿನ್ ಕಾವೇರಪ್ಪ ಪುರುಷರಲ್ಲಿನ ಪ್ರಾಸ್ಟೇಟ್ ಮತ್ತು ಮೂತ್ರಪಿಂಡದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿತು. ಡಾ.ಕೆ.ಎ.ತಿಮ್ಮಯ್ಯ ಮಾತನಾಡಿ, ರಾಷ್ಟ್ರೀಯ ಸಮೀಕ್ಷೆಗಳ ಪ್ರಕಾರ ಭಾರತದ ಶೇ.10 ರಿಂದ 13 ರಷ್ಟು ವಯಸ್ಕರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲವು ರಾಜ್ಯಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. 50 ವರ್ಷ ಮೇಲ್ಪಟ್ಟ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಎಂದು ತಿಳಿಸಿದರು. ಅನೇಕ ಪುರುಷರು ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಅಥವಾ ರಾತ್ರಿ ವೇಳೆ ಅತಿಯಾಗಿ ಬಾತ್‍ರೂಮ್‍ಗೆ ಹೋಗುವುದನ್ನು ವಯಸ್ಸಾದ ಮೇಲೆ ಇದೆಲ್ಲಾ ಸಾಮಾನ್ಯ ಎಂದು ನಿರ್ಲಕ್ಷಿಸುತ್ತಾರೆ. ಇದರಿಂದ ಕಾಯಿಲೆಯನ್ನು ಪತ್ತೆ ಹಚ್ಚುವುದು ತಡವಾಗುತ್ತದೆ ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ವಯಸ್ಸು, ಕೌಟುಂಬಿಕ ಹಿನ್ನೆಲೆ ಮತ್ತು ಜೀವನಶೈಲಿ ಇದಕ್ಕೆ ಮುಖ್ಯ ಕಾರಣ. 45 ವರ್ಷ ಮೇಲ್ಪಟ್ಟವರು ಮತ್ತು ಕುಟುಂಬದಲ್ಲಿ ಇಂತಹ ಕಾಯಿಲೆಯ ಹಿನ್ನೆಲೆ ಇರುವವರು ತಪ್ಪದೆ ಪಿಎಸ್‍ಎ ಪರೀಕ್ಷೆ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವುದು ಸುಲಭ’ ಎಂದರು. ಮೂತ್ರಪಿಂಡದ ಆರೋಗ್ಯದ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡ ಡಾ. ವಿಪಿನ್ ಕಾವೇರಪ್ಪ ಅವರು, ಮಧುಮೇಹ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳು ಕಿಡ್ನಿ ಹಾನಿಗೆ ಪ್ರಮುಖ ಕಾರಣವಾಗುತ್ತಿವೆ ಎಂದು ಎಚ್ಚರಿಸಿದರು. ಇಂತಹ ಸಮಸ್ಯೆಗಳು ಯಾವುದೇ ಲಕ್ಷಣವಿಲ್ಲದೆ ಮೂತ್ರಪಿಂಡದ ಕೆಲಸವನ್ನು ಸಂಪೂರ್ಣವಾಗಿ ನಿಲ್ಲಿಸಬಹುದು. ’40 ವರ್ಷ ದಾಟಿದ ಪುರುಷರು ಮತ್ತು ರೋಗದ ಲಕ್ಷಣವಿರುವವರು ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಅಂಶ ಹಾಗೂ ಕಿಡ್ನಿ ಕಾರ್ಯನಿರ್ವಹಣೆಯ ತಪಾಸಣೆಯನ್ನು ನಿರ್ಲಕ್ಷಿಸಬಾರದು. ಕಡಿಮೆ ಉಪ್ಪು ತಿನ್ನುವುದು, ಹೆಚ್ಚು ನೀರು ಕುಡಿಯುವುದು, ನೋವು ನಿವಾರಕ ಮಾತ್ರೆಗಳನ್ನು ವೈದ್ಯರ ಸಲಹೆ ಇಲ್ಲದೆ ಬಳಸುವುದನ್ನು ನಿಲ್ಲಿಸುವುದು ಮತ್ತು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮೂತ್ರಪಿಂಡವನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು’ ಎಂದು ತಿಳಿಸಿದರು.
‘ಮೂತ್ರಪಿಂಡ ಸಂಪೂರ್ಣವಾಗಿ ಕೆಲಸ ನಿಲ್ಲಿಸಿದಾಗ, ಡಯಾಲಿಸಿಸ್‍ಗೆ ಹೋಲಿಸಿದರೆ, ಮೂತ್ರಪಿಂಡ ಕಸಿಯು ಉತ್ತಮ ಗುಣಮಟ್ಟದ ಜೀವನ ಮತ್ತು ದೀರ್ಘಾಯುಷ್ಯವನ್ನು ನೀಡುವ ಅತ್ಯುತ್ತಮ ಚಿಕಿತ್ಸೆಯಾಗಿದೆ. ಇದರಿಂದ ರೋಗಿಗಳು ಮೊದಲಿನಂತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ರೋಗವನ್ನು ಮೊದಲೇ ಪತ್ತೆಹಚ್ಚುವುದರಿಂದ ಜೀವವನ್ನು ಉಳಿಸಬಹುದು. ಪುರುಷರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದೆ, ಕಾಲಕಾಲಕ್ಕೆ ತಪಾಸಣೆಯನ್ನು ಒಂದು ಆಯ್ಕೆಯಾಗಿ ನೋಡದೆ, ಅದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಸೈನಿಕ ಶಾಲೆಯಲ್ಲಿ ಸೇನಾ ದಿನಾಚರಣೆ : ವಿದ್ಯಾರ್ಥಿಗಳು ಧೈರ್ಯ, ಶಿಸ್ತು ಮತ್ತು ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಕರ್ನಲ್ ಅಮರ್ ಜೀತ್ ಸಿಂಗ್*
Next Article *ಮಡಿಕೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ : ಅಂಬಿಗರ ಚೌಡಯ್ಯ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳಿ : ಡಿ.ಶ್ರುತಿಶ್ರೀ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.