Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ : ಅಂಬಿಗರ ಚೌಡಯ್ಯ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳಿ : ಡಿ.ಶ್ರುತಿಶ್ರೀ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ : ಅಂಬಿಗರ ಚೌಡಯ್ಯ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳಿ : ಡಿ.ಶ್ರುತಿಶ್ರೀ*

January 21, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.21 NEWS DESK : ಬಡತನಕ್ಕೆ ಉಂಬುವ ಚಿಂತೆ, ಉಣಲಾದರೆ ಉಡುವ ಚಿಂತೆ, ಉಡಲಾದರೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ, ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ, ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ, ಇಂತೀ ಹಲವು ಚಿಂತೆಯಲ್ಲಿ ಇರ್ಪುವರ ಕಂಡೆನು, ಶಿವನ ಚಿಂತೆಯಲ್ಲಿದ್ದವರೊಬ್ಬರನ್ನೂ ಕಾಣೆನೆಂದಾತ… ಎಂದು ನಿಜಶರಣ ಅಂಬಿಗರ ಚೌಡಯ್ಯ ಅವರು ವಚನದ ಮೂಲಕ ಸಾರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಸಂದರ್ಭದಲ್ಲಿ ನಗರದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರುತಿಶ್ರೀ ಡಿ. ಅವರು ವಾಚಿಸಿದರು. 12ನೇ ಶತಮಾನದಲ್ಲಿ ಬಸವಣ್ಣ ಅವರು ಸೇರಿದಂತೆ ಎಲ್ಲಾ ವಚನಕಾರರ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ನೀಡಿರುವ ಸುಧಾರಣೆ ಮತ್ತು ಸಂದೇಶಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು. ಹನ್ನೆರಡನೇ ಶತಮಾನದಲ್ಲಿ ಬಂದ ಶರಣರು ಭಾಷಿಕವಾಗಿ, ಧಾರ್ಮಿಕವಾಗಿ, ತಾತ್ವಿಕವಾಗಿ, ಸಾಮಾಜಿಕವಾಗಿ ಬಹಳ ಅಪರೂಪದ ಕ್ರಾಂತಿಯನ್ನೇ ಮಾಡಿದರು. ಬಸವಣ್ಣನವರ ನೇತೃತ್ವದಲ್ಲಿ ಅವರು ಹುಟ್ಟು ಹಾಕಿದ ಮಹಾಮನೆ, ದಾಸೋಹ, ಇಷ್ಟಲಿಂಗ, ಕಾಯಕದಂತಹ ಪರಿಕಲ್ಪನೆಗಳು ಜಗತ್ತಿನ ಯಾವ ಗ್ರಂಥದಲ್ಲೂ ಸಿಗುವುದಿಲ್ಲ. ಅವರು ತಮ್ಮ ಅಂತರಂಗವನ್ನು ಶುದ್ಧಗೊಳಿಸುತ್ತ ಸಮಾಜವನ್ನು ತಿದ್ದಿದವರು ಎಂದು ನುಡಿದರು. ಶತಶತಮಾನಗಳಿಂದಲೂ ಹತ್ತಾರು ರೀತಿಯ ಮೌಢ್ಯಗಳನ್ನು ಹೊತ್ತು ನಲುಗುತ್ತಿದ್ದ ಸಮಾಜಕ್ಕೆ ವೈಚಾರಿಕತೆಯನ್ನು ಕೊಟ್ಟ ಕ್ರಾಂತಿವೀರರು ನಮ್ಮ ಶರಣರು. ಅಂತಹ ಕ್ರಾಂತಿಕಾರಿ ಶರಣರಲ್ಲಿ ಎದ್ದು ಕಾಣುವ ಹೆಸರು ಅಂಬಿಗರ ಚೌಡಯ್ಯನವರು ಎಂದು ವಿವರಿಸಿದರು. ಅಂಬಿಗ ಎನ್ನುವ ಪರಿಕಲ್ಪನೆಯೇ ಬಹಳ ವಿಶೇಷವಾದುದು. ಅದು ಹೊಳೆಯನ್ನು ದಾಟಿಸುವ ಅಣ್ಣನೊಬ್ಬನ ಉಪಕಾರ. ಹಾಗೆಯೇ ಭವದ ಹೊಳೆಯನ್ನು ದಾಟಿಸಿ ಸುರಕ್ಷಿತವಾದ ದಡವನ್ನು ಸೇರಿಸುವ ಯೋಗಿಯೊಬ್ಬನ ತಾತ್ವಿಕ ಅನುಸಂಧಾನವೂ ಹೌದು. ಅಂಬಿಗ ನಾ ನಿನ್ನ ನಂಬಿದೆ ಎನ್ನುವಲ್ಲಿ ನಂಬುವವರನ್ನು ದಡ ಸೇರಿಸುವ ಉಪಕಾರಿಯಾಗಿ ಕಾಣುವ ಈ ಕಲ್ಪನೆ ನಮ್ಮ ದೇಶದಲ್ಲಿ ಬಹಳ ವಿಶಿಷ್ಟವಾದುದು. ತಹಶೀಲ್ದಾರರಾದ ಶ್ರೀಧರ್ ಅವರು ಮಾತನಾಡಿ ಜಗತ್ತಿನಲ್ಲಿ ಮೊದಲ ಬಾರಿಗೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶರಣರ ಕೊಡುಗೆ ಅಪಾರ ಎಂದು ಬಣ್ಣಿಸಿದರು. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಿ ಸಮಾನತೆಯ ಆಂದೋಲನವನ್ನೇ ಹುಟ್ಟು ಹಾಕಿದ ನಿಜ ಚಳುವಳಿ ಎಂದರೆ ಅದು ವಚನ ಚಳುವಳಿ ಎಂದು ಅವರು ವರ್ಣಿಸಿದರು. ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು, ನಂಬಿದರೆ ಒಂದೆ ಹುಟ್ಟಲಿ ಕಡೆಯ ಹಾಯಿಸುವನಂಬಿಗರ ಚೌಡಯ್ಯ ಎಂದು ಹೇಳುತ್ತಾರೆ ಎಂದು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿ ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಮೋಳಿಗೆ ಮಾರಯ್ಯ, ಮಡಿವಾಳ ಮಾಚಯ್ಯ, ಕುಂಬಾರ ಗುಂಡಯ್ಯ, ಮಾದಾರ ಚೆನ್ನಯ್ಯ, ಸೂಳೆ ಸಂಕವ್ವೆಯವರೆಗೂ ತಮ್ಮ ವೃತ್ತಿಗಳನ್ನು ಹೇಳಿಕೊಳ್ಳುವ ಈ ಪರಂಪರೆ ಎಷ್ಟೊಂದು ಅದ್ಭುತ ಎಂದರು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪದ್ಮಾವತಿ ಇತರರು ಇದ್ದರು. ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪುರುಷರಲ್ಲಿ ಹೆಚ್ಚುತ್ತಿರುವ ಪ್ರಾಸ್ಟೇಟ್ ಮತ್ತು ಮೂತ್ರಪಿಂಡ ಸಮಸ್ಯೆ : ನಿರ್ಲಕ್ಷ್ಯ ಬೇಡ, ಜಾಗೃತೆ ಇರಲಿ : ಮಣಿಪಾಲ್ ವೈದ್ಯರ ಸಲಹೆ*
Next Article *ಜ.24 ರಿಂದ 26 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.