Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ.24 ರಿಂದ 26 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ*
ಇತ್ತೀಚಿನ ಸುದ್ದಿಗಳು

*ಜ.24 ರಿಂದ 26 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ*

January 21, 20264 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.21 NEWS DESK : ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 24 ರಿಂದ 26 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.  ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರು ನೆರವೇರಿಸಲಿದ್ದಾರೆ. ಜಿಲ್ಲೆಯ ಶಾಸಕರುಗಳು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.  ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿಯನ್ನು 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ.   ಭಾರತ ಏಕೀಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ಕಲಾಕೃತಿಗಳನ್ನು 2.5 ಅಡಿ ಮತ್ತು 2.0 ಅಡಿ ಎತ್ತರದಲ್ಲಿ ನಾಲ್ಕು ಕಲಾಕೃತಿಗಳು ಮತ್ತು 4.5 ಅಡಿ ಮತ್ತು 4.0 ಅಡಿ ಎತ್ತರದಲ್ಲಿ 2 ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಸಂಗೀತ ಕಲಾಕೃತಿಗಳಾದ 2 ಸಂಖ್ಯೆ ತಬಲಾ ಕಲಾಕೃತಿಯನ್ನು 2.5 ಅಡಿ ಎತ್ತರ ಮತ್ತು 3 ಅಡಿ ಎತ್ತರ ಕಲಾಕೃತಿಗಳು, ಪಿಯಾನೊ ಕಲಾಕೃತಿಯನ್ನು 5 ಅಡಿ ಎತ್ತರ, 4 ಅಡಿ ಅಗಲ ಮತ್ತು 3 ಅಡಿ ಉದ್ದದ ಕಲಾಕೃತಿಗಳು, ಹರ್ಪ್ ಕಲಾಕೃತಿಯನ್ನು  6 ಅಡಿ ಎತ್ತರ, 3 ಅಡಿ ಅಗಲ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಗಣರಾಜ್ಯೋತ್ಸವದ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು 8 ಅಡಿ ಎತ್ತರದಲಿ ಕಲಾಕೃತಿಗಳನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ.  ಹಾರುವ ಹಕ್ಕಿಯ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣವಾಗಲಿದೆ. ಮೀನಿನ  ಕಲಾಕೃತಿಯನ್ನು  ವಿವಿಧ  ಬಣ್ಣದ ಹೂವುಗಳಿಂದ ನಿರ್ಮಾಣ ಮಾಡಲಾಗುವುದು. ಬಟರ್‍ಪ್ಲೈ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಹೂವಿನಿಂದ ಕರಡಿ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ.  ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಬ್ಲೂವೇ, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ   ನಿರ್ಮಿಸಲಾಗುವುದು. ಹಾರ್ಟ್ ಶೇಪ್ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುವುದು. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗುವುದು. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು.  ಗಾಂಧಿ ಮೈದಾನದಲ್ಲಿ 60 ಸಂಖ್ಯೆಯ ವಿವಿಧ ಇಲಾಖೆಗಳು, ಏಜೆನ್ಸಿಗಳು, ಸಂಸ್ಥೆಗಳು ಮಳಿಗೆಯನ್ನು ನಿರ್ಮಿಸಲಾಗುವುದು. ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಫ್‍ಕಾಮ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶಿಕೆಗಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ಜನವರಿ, 23 ರಿಂದಲೇ ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿಕೊಳ್ಳುವುದು. ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಇಂದಿನಿಂದಲೇ ಅಥವಾ ನೇರವಾಗಿ ಜನವರಿ, 24 ರ ಬೆಳಗ್ಗೆ 8 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರನ್ನು ನೊಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಶಾಲೆಯಿಂದ ಶಾಲಾ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ರಾಜಾಸೀಟು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.  :: ಜ.24 ರಂದು ಚಾಲನೆ ::  ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಆರ್.ಗಿರೀಶ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಇಬ್ರಾಹಿಂ ಮೈಗೂರ್,  ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ಬೆಂಗಳೂರು ಲಾಲ್‍ಬಾಗ್ ಕ್ಷೇತ್ರ ಮತ್ತು ನರ್ಸರಿ ತೋಟಗಾರಿಕೆ ಅಪರ ನಿರ್ದೇಶಕರಾದ  ಡಾ.ಕೆ.ಎಂ.ಪರಶಿವಮೂರ್ತಿ, ತೋಟಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕರಾದ ಡಾ.ಪ್ರಕಾಶ್ ಎಂ.ಸೊಬರದ, ಬೆಂಗಳೂರು ಲಾಲ್‍ಬಾಗ್ ಕಾರ್ಯನಿರ್ವಾಹಕ ನಿರ್ದೇಶಕರಾದ(ಕರಾತೋಮಿಏ) ಡಾ.ಕೆ.ಬಿ.ದುಂಡಿ, ಲಾಲ್‍ಬಾಗ್ ತೋಟಗಾರಿಕೆ ಅಪರ ನಿರ್ದೇಶಕರಾದ(ತಾಳೆ ಬೆಳೆ) ಡಾ.ಎಸ್.ನಂದ, ತೋಟಗಾರಿಕೆ ಅಪರ ನಿರ್ದೇಶಕರಾದ (ಹನಿ ನೀರಾವರಿ) ಕದಿರೇಗೌಡ, ಲಾಲ್‍ಬಾಗ್ ಪಾಕ್ರ್ಸ್ ಮತ್ತು ಗಾರ್ಡನ್ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಎಂ.ಜಗದೀಶ್, ಲಾಲ್‍ಬಾಗ್ ತೋಟಗಾರಿಕೆ ಅಪರ ನಿರ್ದೇಶಕರಾದ (ಯೋಜನೆ) ಎಚ್.ಎಂ.ಕೃಷ್ಣಮೂರ್ತಿ, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತೋಟಗಾರಿಕೆ ಉಪ ನಿರ್ದೇಶಕರಾದ ಶಶಿಧರ್ ಎಚ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ : ಅಂಬಿಗರ ಚೌಡಯ್ಯ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳಿ : ಡಿ.ಶ್ರುತಿಶ್ರೀ*
Next Article *ಕೊಡವರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಪರಿಪೂರ್ಣ ಗಣರಾಜ್ಯಕ್ಕಾಗಿ ಒತ್ತಾಯಿಸಿ ಜ.26ರಂದು ಸಿಎನ್‍ಸಿ ಸತ್ಯಾಗ್ರಹ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.